ADVERTISEMENT

ಪ್ರತಿಭಾ ಪುರಸ್ಕಾರ; ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 5:35 IST
Last Updated 24 ಫೆಬ್ರುವರಿ 2026, 5:35 IST
<div class="paragraphs"><p>ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ: ಅರ್ಜಿ ಆಹ್ವಾನ</p></div>

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ: ಅರ್ಜಿ ಆಹ್ವಾನ

   

ಚಿತ್ರದುರ್ಗ: ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಾಧಕರಿಗೆ ಜಿಲ್ಲಾ ರೆಡ್ಡಿ ಜನಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

2024–25ನೇ ಸಾಲಿನಲ್ಲಿ ಶೇ 90ರಷ್ಟು ಅಂಕ ಪಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ, ಶೇ 85ರಷ್ಟು ಪಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕಳೆದ ವರ್ಷ ಡಿ. 25ರಂದೇ ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಾಗಿದೆ. ಆದರೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ 85, ದ್ವಿತೀಯ ಪಿಯುಸಿಯಲ್ಲಿ ಶೇ 80ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೂ ಪ್ರತಿಭಾ ಪುರಸ್ಕಾರ ನೀಡಬೇಕು ಎಂದು ಸಮುದಾಯದ ಸದಸ್ಯರು ಮನವಿ ಮಾಡಿದ ಕಾರಣ ಮತ್ತೆ ಪ್ರತಿಭಾ ಪುರಸ್ಕಾರ ವಿತರಿಸಲು ನಿರ್ಧರಿಸಲಾಗಿದೆ.

ADVERTISEMENT

ಅರ್ಹರು ಮಾರ್ಚ್‌ 10ರೊಳಗೆ ರೆಡ್ಡಿ ಸಂಘದ ಕಚೇರಿಗೆ ಅರ್ಜಿ ಸಲ್ಲಿಸಲು ಸಂಘದ ಕಾರ್ಯದರ್ಶಿಗಳಾದ ಜೆ.ಪರಶುರಾಮ ಮತ್ತು ಡಿ.ಕೆ.ಶೀಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.