ಹೊನ್ನಾಳಿ: ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕಿನ ಬೇಡಜಂಗಮ ಸಮಾಜದಿಂದ ಕಳೆದ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜುಲೈ 20 ರಂದು ಬೆಳಿಗ್ಗೆ 11 ಗಂಟೆಗೆ ಹಿರೇಕಲ್ಮಠದ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಂ. ಪಂಚಾಕ್ಷರಯ್ಯ ಹೇಳಿದರು.
ಬೇಡ ಜಂಗಮ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ಸರ್ಕಾರಿ ನೌಕರರಿಗೆ ಗುರುರಕ್ಷೆ ಕಾರ್ಯಕ್ರಮದ ಅಂಗವಾಗಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸಮಾರಂಭದಲ್ಲಿ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಕಡೇನಂದಿಹಳ್ಳಿ ಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಗೋವಿನಕೋವಿ ಹಾಲಸ್ವಾಮೀಜಿ ಮಠದ ಶಿವಯೋಗಿ ವಿಶ್ವಾರಾಧ್ಯ ಮಹಾಲಿಂಗ ಹಾಲಸ್ವಾಮೀಜಿ, ರಾಂಪುರ ಹಾಲಸ್ವಾಮೀಜಿ ಮಠದ ಶಿವಕುಮಾರ ಸ್ವಾಮೀಜಿ, ಕತ್ತಿಗೆ ಮಠದ ಚನ್ನಪ್ಪ ಸ್ವಾಮೀಜಿ ಭಾಗವಹಿಸಲಿದ್ದಾರೆ.
ಶಾಸಕ ಡಿ.ಜಿ.ಶಾಂತನಗೌಡ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಜಿ.ಪಂ. ಮಾಜಿ ಸದಸ್ಯ ಬಿ.ಎಂ. ವಾಗೀಶ್‍ಸ್ವಾಮಿ, ಶಿವಮೊಗ್ಗದ ಎ.ಎಂ.ಚಂದ್ರಯ್ಯ, ಹರಿಹರದ ಡಿ.ಎಂ. ಹಾಲಸ್ವಾಮಿ, ನ್ಯಾಮತಿ ರೇವಣಸಿದ್ದಯ್ಯ, ಟಿ.ಎಂ. ಪತ್ರೇಶ್, ಜಗಳೂರಿನ ಶಿವಕುಮಾರಸ್ವಾಮಿ, ಚನ್ನಗಿರಿಯ ಎಂ.ಎಸ್.ಪ್ರಕಾಶ್, ಶಿಕಾರಿಪುರದ ಎಚ್.ಕೆ.ಪಿ. ಪುಟ್ಟಯ್ಯ, ಮಹಿಳಾ ಘಟಕದ ಎ.ಜಿ. ಹೇಮಲತಾ, ಎಚ್.ಎಂ. ಗಂಗಾಧರಯ್ಯ ಭಾಗವಹಿಸಲಿದ್ದಾರೆ ಎಂದರು.
ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಎಸ್.ರುದ್ರಸ್ವಾಮಿ ಕುಳಗಟ್ಟೆ, ಡಾ.ಸಾಲಿಮಠ್, ಲೋಕೇಶಯ್ಯ, ಬಸವರಾಜಯ್ಯ, ಕೊಟ್ರೇಶ್, ಎಂ.ಎಸ್. ಶಾಸ್ತ್ರೀ ಹೊಳೆಮಠ, ಎಚ್.ಎಂ.ರುದ್ರೇಶ್, ಚನ್ನಯ್ಯ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.