ADVERTISEMENT

ಗರ್ಭಿಣಿ ಸಾವು: ವೈದ್ಯರ ನಿರ್ಲಕ್ಷ್ಯ: ಆರೋಪ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2020, 7:30 IST
Last Updated 9 ನವೆಂಬರ್ 2020, 7:30 IST

ಚನ್ನಗಿರಿ: ತಾಲ್ಲೂಕಿನ ತಾವರಕೆರೆ ಗ್ರಾಮದಲ್ಲಿ ಗರ್ಭಿಣಿಯೊಬ್ಬರು ಹೆರಿಗೆ ವೇಳೆ ನೋವು ತಾಳಲಾರದೆ ಮೃತಪಟ್ಟಿದ್ದಾರೆ.

ಗ್ರಾಮದ ಖಮರುನ್ನೀಸಾ (26) ಮೃತಪಟ್ಟವರು. ಶನಿವಾರ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆರಂಭದಲ್ಲಿ ತಾವರಕರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಂತರ
ಚನ್ನಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಶಿವಮೊಗ್ಗಕ್ಕೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದರು.

ಶಿವಮೊಗ್ಗ ಆಸ್ಪತ್ರೆಗೆ ತೆರಳುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.