ಮಲೇಬೆನ್ನೂರು: ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ವರ್ತನೆ ಹಾಗೂ ಕಾರ್ಯವೈಖರಿ ಖಂಡಿಸಿ ಪುರಸಭೆ ಅಧ್ಯಕ್ಷ ಹನುಮಂತಪ್ಪ ಸೇರಿದಂತೆ ಕುಟುಂಬದ ಸದಸ್ಯರು ಶುಕ್ರವಾರ ಪುರಸಭೆ ಕಚೇರಿ ಎದುರು ಧರಣಿ ಆರಂಭಿಸಿದರು.
ಮುಖ್ಯಾಧಿಕಾರಿ ವಿರುದ್ಧ ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ದೂರು ಸಲ್ಲಿಸಿದ್ದೇವೆ.
ಆದರೆ ಘಟನೆ ಮನಸ್ಸಿಗೆ ನೋವುಂಟುಮಾಡಿದೆ ಎಂದರು.
ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಕಾನೂನು ಕ್ರಮ ಜರುಗಿಸುವ ತನಕ ಧರಣಿ ಮುಂದುವರಿಸುವುದಾಗಿ ತಿಳಿಸಿದರು.
ಎಎಸ್ಐ ಶ್ರೀನಿವಾಸ್ ನಡೆಸಿದ ಸಂಧಾನ ವಿಫಲವಾಯಿತು.
ಪೊಲೀಸರು ಭದ್ರತೆ ಒದಗಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.