
ದಾವಣಗೆರೆ: ‘ವಿಬಿ– ಜಿ ರಾಮ್ ಜಿ ಕಾಯ್ದೆ ಬಗ್ಗೆ ಕಾಂಗ್ರೆಸ್ ನೀಡಿದ್ದ ಜಾಹೀರಾತಿನಲ್ಲಿ ಸತ್ಯದ ಸಂದೇಶವಿದೆ. ಬಿಜೆಪಿ ನೀಡಿದ ಜಾಹೀರಾತು ಅಸತ್ಯದಿಂದ ಕೂಡಿದೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಎಚ್. ಗೋಪಗೊಂಡನ ಹಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಬಿ– ಜಿ ರಾಮ್ ಜಿ ಕಾಯ್ದೆಯನ್ನು ಸಮರ್ಥಿಸಿಕೊಳ್ಳಲು ರಾಜ್ಯ ಬಿಜೆಪಿ ಶಾಸಕರಿಗೆ ಸದನದಲ್ಲಿ ಅವಕಾಶ ಇತ್ತು. ಆದರೂ ಅವರು ಸಭಾತ್ಯಾಗ ಮಾಡಿದ್ದು ಯಾಕೆ?’ ಎಂದು ಪ್ರಶ್ನಿಸಿದರು.
‘ರಾಜ್ಯದಲ್ಲಿ ಆಪರೇಷನ್ ಕಮಲ ಶುರು ಮಾಡಿದ್ದೇ ಬಿಜೆಪಿ. ಬಿಜೆಪಿಯವರ ಪ್ರವೃತ್ತಿ ನಮಗೆ ಬೇಕಾಗಿಲ್ಲ. ವಿಪಕ್ಷದಲ್ಲಿ ಸಮರ್ಥ ನಾಯಕರೇ ಇಲ್ಲ. ಆದರೂ, ಅವರು ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದರು.
‘ಸಂಸತ್ತಿನಲ್ಲಿ ಪ್ರಧಾನಿ ಮೇಲೆ ಸಂಸದೆಯರಿಂದ ಹಲ್ಲೆಗೆ ಸಂಚು ನಡೆದಿತ್ತು ಎಂದು ಸ್ಪೀಕರ್ ಹೇಳಿದ್ದಾರೆ. ಹಾಗಿದ್ದರೆ ಗೃಹ ಸಚಿವ ಅಮಿತ್ ಶಾ ಎಷ್ಟು ಸಮರ್ಥರೆಂಬ ಪ್ರಶ್ನೆ ಮೂಡುತ್ತದೆ’ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.