ದಾವಣಗೆರೆ: ತುರ್ಚಘಟ್ಟ ನಿರಾಶ್ರಿತರ ಪರಿಹಾರ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿ ಶುಕ್ರವಾರ ರಾತ್ರಿ 16 ಜನ ನಿರಾಶ್ರಿತರನ್ನು ರಕ್ಷಿಸಿದ್ದಾರೆ.
ರೈಲು ನಿಲ್ದಾಣ, ಬಸ್ ನಿಲ್ದಾಣ, ದೇವಸ್ಥಾನ ಹಾಗೂ ಮಾರುಕಟ್ಟೆ ಪ್ರದೇಶಗಳಲ್ಲಿದ್ದ 16 ಜನ ನಿರಾಶ್ರಿತರನ್ನು ರಕ್ಷಿಸಿ, ಅವರ ಆರೋಗ್ಯ ಪರೀಕ್ಷೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ನಿರಾಶ್ರಿತರ ಕೇಂದ್ರದಲ್ಲಿ ಅವರಿಗೆ ಉಪಾಹಾರ, ಊಟ ನೀಡಲಾಗುತ್ತಿದೆ. ವೃತ್ತಿ ಆಧಾತ ತರಬೇತಿಯನ್ನೂ ನೀಡ ಲಾಗುತ್ತಿದೆ. ಆರೋಗ್ಯಯುತ ಜೀವನ ರೂಪಿಸಿಕೊಳ್ಳಲು ಪೂರಕವಾದಂತಹ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ನಾಗರಾಜ ತಿಳಿಸಿದ್ದಾರೆ. ಪರಿಹಾರ ಕೇಂದ್ರದ ಅಧೀಕ್ಷಕ ಕಾಶೀನಾಥ್ ಕೆ.ಆರ್., ಸಿಬ್ಬಂದಿ ಹನುಮಂತ ನಾಯ್ಕ, ನವೀನ ಕುಮಾರ, ಹೇಮಂತ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.