ADVERTISEMENT

ಇಬ್ಬರು ಬಾಲ ಕಾರ್ಮಿಕರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 2:31 IST
Last Updated 1 ಜನವರಿ 2021, 2:31 IST

ದಾವಣಗೆರೆ:ನಗರದ ಕುಂದುವಾಡ ರಸ್ತೆ ಹಾಗೂ ಲಕ್ಷ್ಮೀ ಫ್ಲೋರ್ ಮಿಲ್ ಬಳಿ ದಾಳಿ ನಡೆಸಿದ ಅಧಿಕಾರಿಗಳು ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.

ಜಿಲ್ಲಾಧಿಕಾರಿ ನಿರ್ದೇಶನದಲ್ಲಿ ಕಾರ್ಮಿಕ ಇಲಾಖೆ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಸ್ಥೆ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಇಬ್ಬರು ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪುನರ್ವಸತಿ ಮತ್ತು ಮುಂದಿನ ಕ್ರಮಕ್ಕಾಗಿ ಮಕ್ಕಳ ಕಲ್ಯಾಣ ಸಮಿತಿಯ ವಶಕ್ಕೆ ನೀಡಲಾಗಿದೆ. ಇವರನ್ನು ಕೆಲಸಕ್ಕೆ ನಿಯೋಜಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಂಡದಲ್ಲಿ ಕಾರ್ಮಿಕ ನಿರೀಕ್ಷಕರಾದ ರಾಜಶೇಖರ್ ಹಿರೇಮಠ, ರಾಜಪ್ಪ ಟಿ., ಕವಿತಾಕುಮಾರಿ, ಎನ್.ಸಿ.ಎಲ್.ಪಿ ಯೋಜನಾ ನಿರ್ದೇಶಕ ಪ್ರಸನ್ನ ಇ.ಎನ್. ಇದ್ದರು. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಕ ಮಾಡಿಕೊಂಡಿರು
ವುದು ಕಂಡು ಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ–1098, ಕಾರ್ಮಿಕ ಇಲಾಖೆ (08192 –237332, 230094), ರಾಷ್ಟ್ರೀಯ ಬಾಲಕಾರ್ಮಿಕರ ಯೋಜನಾ ಸಂಸ್ಥೆ (08192-256626) ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.