ADVERTISEMENT

ಪಶು ವೈದ್ಯೆಯ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2019, 20:30 IST
Last Updated 3 ಡಿಸೆಂಬರ್ 2019, 20:30 IST
ಹೈದರಾಬಾದ್‌ನಲ್ಲಿ ಪಶು ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಆಲ್ ಇಂಡಿಯಾ ಡೆಮಾಕ್ರಟಿಕ್ ಆರ್ಗನೈಸೇಷನ್ ಸದಸ್ಯರು ಹಾಗೂ ವಿದ್ಯಾರ್ಥಿಗಳು ದಾವಣಗೆರೆಯ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ
ಹೈದರಾಬಾದ್‌ನಲ್ಲಿ ಪಶು ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಆಲ್ ಇಂಡಿಯಾ ಡೆಮಾಕ್ರಟಿಕ್ ಆರ್ಗನೈಸೇಷನ್ ಸದಸ್ಯರು ಹಾಗೂ ವಿದ್ಯಾರ್ಥಿಗಳು ದಾವಣಗೆರೆಯ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ   

ದಾವಣಗೆರೆ: ಹೈದರಾಬಾದ್‌ನಲ್ಲಿ ಪಶು ವೈದ್ಯೆಯ ಮೇಲಿನ ಅತ್ಯಾಚಾರ ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಆಲ್‌ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್‌ವತಿಯಿಂದ ಮಂಗಳವಾರ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಎಐಎಂಎಸ್‌ಎಸ್‌ನ ಜಿಲ್ಲಾ ಘಟಕದ ಅಧ್ಯಕ್ಷೆ ಜ್ಯೋತಿ ಕುಕ್ಕವಾಡ ಮಾತನಾಡಿ, ‘ಸಮಾಜದಲ್ಲಿ ದಿನೇ ದಿನೇ ಇಂತಹ ಘಟನೆಗಳು ಹೆಚ್ಚಾಗುತ್ತಿದ್ದು, ಇದು ಸರ್ಕಾರಗಳ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ನಿರ್ಭಯಾ ಘಟನೆ ನಂರ ಜಸ್ಟೀಸ್ ವರ್ಮಾ ಆಯೋಗದ ಶಿಫಾರಸು ಮಾಡಿದ ಸಲಹೆಗಳನ್ನು ಇನ್ನೂ ಜಾರಿಗೊಳಿಸಿಲ್ಲ. ಇಂತಹ ಘಟನೆಗಳಿಂದ ಸಮಾಜ ಅಧೋಗತಿಗೆ ಹೋಗುತ್ತಿದೆ’ ಎಂದು ಆರೋಪಿಸಿದರು.

ಎಐಡಿವೈಓನ ಜಿಲ್ಲಾ ಉಪಾಧ್ಯಕ್ಷ ಮಧು ತೊಗಲೇರಿ, ‘ನಮ್ಮ ದೇಶದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲ. ಅತ್ಯಾಚಾರ ನಡೆದ ನಂತರ ಆರೋಪಿಗಳಿಗೆ ರಕ್ಷಣೆ ಸಿಗುತ್ತಿದೆ. ಇದು ನಮ್ಮ ದೇಶದ ದುರಂತ’ ಎಂದು ಹೇಳಿದರು.

ADVERTISEMENT

ಎಐಎಂಎಸ್‌ನ ಜಿಲ್ಲಾ ಕಾರ್ಯದರ್ಶಿ ಭಾರತಿ ಮಾತನಾಡಿದರು. ಎಐಡಿವೈಒನ ಜಿಲ್ಲಾ ಸಂಘಟಕ ಪಿ. ಪರಶುರಾಮ್, ಎಐಎಂಎಸ್‌ಎಸ್ನ ಸದಸ್ಯರಾದ ಅಶ್ವಿನಿ, ಎಐಡಿಎಸ್‌ಒ ಜಿಲ್ಲಾ ಸಂಘಟಕರಾದ ಸೌಮ್ಯ, ನಾಗಜ್ಯೋತಿ, ಪೂಜಾ, ತಿಪ್ಪೇಸ್ವಾಮಿ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.