ADVERTISEMENT

ಸೇತುವೆ ನಿರ್ಮಾಣಕ್ಕೆ ಒತ್ತಾಯ: ನಾಳೆ ರಸ್ತೆತಡೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2020, 11:21 IST
Last Updated 4 ಜುಲೈ 2020, 11:21 IST

ದಾವಣಗೆರೆ: ಎಚ್‌. ಕಲಪನಹಳ್ಳಿ ಹಾಗೂ ಮಲ್ಲಶೆಟ್ಟಿಹಳ್ಳಿ ಗ್ರಾಮಗಳ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿಗೆ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಜುಲೈ 6ರಂದು ಗ್ರಾಮಸ್ಥರೊಂದಿಗೆ ರಸ್ತೆತಡೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿನ್ನಸಮುದ್ರ ಶೇಖರ ನಾಯ್ಕ ಹೇಳಿದರು.

‘ಸೇತುವೆ ಇಲ್ಲದ ಕಾರಣ ಹೆದ್ದಾರಿ ದಾಟಲು ಹರಸಾಹಸ ಪಡಬೇಕಾಗಿದೆ. ಜನ, ಜಾನುವಾರು ಓಡಾಡಲು, ರೈತರು ಬೆಳೆ ಒಯ್ಯಲು ತೊಂದರೆಯಾಗಿದೆ. ಹಲವು ಬಾರಿ ಅಪಘಾತಗಳು ಸಂಭವಿಸಿವೆ. ಸೇತುವೆ ನಿರ್ಮಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ಪ್ರಯೋಜನವಾಗಿಲ್ಲ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ಹೆದ್ದಾರಿ ಪ್ರಾಧಿಕಾರ ಗ್ರಾಮದ ಬಳಿ ಸೇತುವೆ ನಿರ್ಮಿಸುವ ಕಾಮಗಾರಿ ಕೈಬಿಟ್ಟಿದೆ. ಇದರಿಂದ ತೊಂದರೆಯಾಗಿದೆ. ಶೀಘ್ರ ಸೇತುವೆ ನಿರ್ಮಿಸುವ ಭರವಸೆಯಲ್ಲಿ ಅಧಿಕಾರಿಗಳು ನೀಡಬೇಕು. ಕೂಡಲೇ ಕಾಮಗಾರಿ ಆರಂಭಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸುತ್ತೇವೆ’ ಎಂದು ಸೇನೆ ರಾಜ್ಯ ಉಪಾಧ್ಯಕ್ಷ ಹೊನ್ನೂರು ಮುನಿಯಪ್ಪ ಹೇಳಿದರು.

ADVERTISEMENT

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ಮಾತನಾಡಿದರು. ಮಲ್ಲಶೆಟ್ಟಿಹಳ್ಳಿ ಹನುಮೇಶಿ, ಎಂ.ಜಿ. ನಾಗರಾಜಪ್ಪ, ಗ್ರಾಮಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.