ADVERTISEMENT

ರಾಜ್ಯ ಸರ್ಕಾರದ ವಿರುದ್ಧ ಮನೆಗಳಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಮೇ 2021, 2:40 IST
Last Updated 17 ಮೇ 2021, 2:40 IST
ಕೋವಿಡ್ ಸಂದರ್ಭದಲ್ಲಿ ಜನರ ಜೀವ ಉಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ನಿಮಾ೯ಣ ಮತ್ತು ಕಾರ್ಮಿಕರ ಒಕ್ಕೂಟವು ಶನಿವಾರ ಪ್ರತಿಭಟನೆ ನಡೆಸಿತು.
ಕೋವಿಡ್ ಸಂದರ್ಭದಲ್ಲಿ ಜನರ ಜೀವ ಉಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ನಿಮಾ೯ಣ ಮತ್ತು ಕಾರ್ಮಿಕರ ಒಕ್ಕೂಟವು ಶನಿವಾರ ಪ್ರತಿಭಟನೆ ನಡೆಸಿತು.   

ದಾವಣಗೆರೆ: ಕೋವಿಡ್ ಸಂದರ್ಭದಲ್ಲಿ ಜನರ ಜೀವ ಉಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ನಿಮಾ೯ಣ ಮತ್ತು ಕಾರ್ಮಿಕರ ಒಕ್ಕೂಟವು ಶನಿವಾರ ಪ್ರತಿಭಟನೆ ನಡೆಸಿತು.

ಲಾಕ್‌ಡೌನ್ ಕಾರಣ ಬಹುತೇಕರು ತಮ್ಮ ಮನೆಗಳಲ್ಲಿ ಹಾಗೂ ಮನೆ ಸಮೀಪದ ವೃತ್ತಗಳಲ್ಲಿ ಸೇರಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಜನಾಗ್ರಹ ಆಂದೋಲನದ ಕರೆಯಂತೆ ನಡೆದ ಈ ಪ್ರತಿಭಟನೆಯಲ್ಲಿ ಪೌರಕಾರ್ಮಿಕರು, ಒಳಚರಂಡಿ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು, ಮತ್ತು ಅಸಂಘಟಿತ ಕಾರ್ಮಿಕರು ಪಾಲ್ಗೊಂಡಿದ್ದರು.

ADVERTISEMENT

ಸರ್ಕಾರದ ಧೋರಣೆಯಿಂದಾಗಿ ದುಡಿಯುವ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಈ ಬಿಕ್ಕಟ್ಟಿನ ಬಗ್ಗೆ ಮುಖ್ಯಮಂತ್ರಿ ಸಹಿತ ಹಲವರಿಗೆ ಮನವಿ ನೀಡಿದ್ದರೂ ಸರ್ಕಾರ ಪರಿಗಣಿಸಿಲ್ಲ. ಆಮ್ಲಜನಕ ಪೂರೈಕೆ ಕೊರತೆ ಇರುವುದರಿಂದ ಸೋಂಕಿತರ ಚಿಕಿತ್ಸೆಗಾಗಿ ಆಮ್ಲಜನಕ ಬೆಡ್‌ ಜಾಸ್ತಿ ಮಾಡಲು ಸಾಧ್ಯವಿಲ್ಲ. ಇರುವುದರಲ್ಲೇ ಚಿಕಿತ್ಸೆ ನೀಡಬೇಕಿದೆ ಎಂದು ಸರ್ಕಾರದ ಅಧಿಕಾರಿಗಳೇ ಹೇಳುತ್ತಿದ್ದಾರೆ. ಇದೆಲ್ಲ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಒಕ್ಕೂಟದ ಜಿಲ್ಲಾಧ್ಯಕ್ಷ ಮಂಜುನಾಥ ಕೆ.ಎಂ., ಉಪಾಧ್ಯಕ್ಷ ವೆಂಕಟೇಶ ಜೆ.ವಿ., ಸದಸ್ಯರಾದ ಕೃಷ್ಣಪ್ಪ ಒ., ದುಗ್ಗಪ್ಪ, ಶಂಕರ, ರೇಖಾ, ರಾಮಲಮ್ಮ, ಮಾರ್ತಾಂಡ, ಕುಮಾರ, ಸಂತೋಷ, ಮಹಾಂತೇಶ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.