ADVERTISEMENT

ದಾವಣಗೆರೆ | ಚಿನ್ನಾಭರಣ ದರೋಡೆ ಪ್ರಕರಣ: ಪ್ರೊಬೇಷನರಿ ಪಿಎಸ್‌ಐ ಸೇವೆಯಿಂದ ವಜಾ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2025, 13:18 IST
Last Updated 27 ನವೆಂಬರ್ 2025, 13:18 IST
<div class="paragraphs"><p>ಪ್ರವೀಣ್‌ ಕುಮಾರ್‌ ಮತ್ತು&nbsp;ಮಾಳಪ್ಪ ಚಿಪ್ಪಲಕಟ್ಟಿ&nbsp;</p></div>

ಪ್ರವೀಣ್‌ ಕುಮಾರ್‌ ಮತ್ತು ಮಾಳಪ್ಪ ಚಿಪ್ಪಲಕಟ್ಟಿ 

   

ದಾವಣಗೆರೆ: ಆಭರಣ ತಯಾರಕರೊಬ್ಬರಿಂದ 78 ಗ್ರಾಂ ಚಿನ್ನಾಭರಣ ದರೋಡೆ ಮಾಡಿದ ಆರೋಪ ಎದುರಿಸುತ್ತಿರುವ ಪ್ರೊಬೇಷನರಿ ಪಿಎಸ್‌ಐ ಮಾಳಪ್ಪ ಚಿಪ್ಪಲಕಟ್ಟಿಯನ್ನು ಸೇವೆಯಿಂದ ವಜಾಗೊಳಿಸಿ ಪೊಲೀಸ್‌ ಇಲಾಖೆ ಆದೇಶಿಸಿದೆ. ಮತ್ತೊಬ್ಬ ಪಿಎಸ್‌ಐ ಪ್ರವೀಣ್‌ಕುಮಾರ್‌ನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಮಾಳಪ್ಪ ಚಿಪ್ಪಲಕಟ್ಟಿ ಹಾವೇರಿ ಜಿಲ್ಲೆಯ ಹಂಸಬಾವಿ ಪೊಲೀಸ್‌ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪ್ರವೀಣ್‌ಕುಮಾರ್‌ ರಾಣೆಬೆನ್ನೂರು ಸಂಚಾರ ಠಾಣೆಯಿಂದ ಶಿವಮೊಗ್ಗ ಜಿಲ್ಲೆಯ ಸಾಗರ ಠಾಣೆಗೆ ವರ್ಗಾವಣೆಗೊಂಡಿದ್ದರು.

ADVERTISEMENT

‘ಸಾರ್ವಜನಿಕರಿಗೆ ರಕ್ಷಣೆ ನೀಡುವ ಹಾಗೂ ನೊಂದವರಿಗೆ ನ್ಯಾಯ ಕೊಡಿಸುವಂತಹ ಬಹುಮುಖ್ಯ, ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ದರೋಡೆ ಕೃತ್ಯ ಎಸಗಿದ್ದು ಘೋರ ಅ‍ಪರಾಧ. ಮೊದಲ ಆರೋಪಿ ಮಾಳಪ್ಪ ಚಿಪ್ಪಲಕಟ್ಟಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪ್ರವೀಣ್‌ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದು ಪೂರ್ವ ವಲಯದ ಐಜಿಪಿ ಬಿ.ಆರ್‌. ರವಿಕಾಂತೇಗೌಡ ಆದೇಶದಲ್ಲಿ ತಿಳಿಸಿದ್ದಾರೆ.

ನ.24ರಂದು ನಸುಕಿನಲ್ಲಿ ಕಾರವಾರದ ಆಭರಣ ತಯಾರಕ ವಿಶ್ವನಾಥ್ ಅರ್ಕಸಾಲಿ ಅವರಿಂದ ₹ 7.5 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದರೋಡೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪಿಎಸ್‌ಐ ಸೇರಿ 7 ಆರೋಪಿಗಳನ್ನು ಕೆಟಿಜೆ ನಗರ ಠಾಣೆಯ ಪೊಲೀಸರು ನ.25ರಂದು ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.