ADVERTISEMENT

ದಾವಣಗೆರೆ | ದ್ವಿತೀಯ ಪಿಯು ಪರೀಕ್ಷೆ ಆರಂಭ: 713 ಮಂದಿ ಗೈರು

ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ, ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2023, 11:38 IST
Last Updated 9 ಮಾರ್ಚ್ 2023, 11:38 IST
ದಾವಣಗೆರೆಯ ಎವಿಕೆ ಕಾಲೇಜಿನ ಮುಂಭಾಗದಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆ ಬರೆಯಲು ಪೊಲೀಸ್ ಬಂದೋಬಸ್ತ್‌ನಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ಸಾಗಿದರು –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ದಾವಣಗೆರೆಯ ಎವಿಕೆ ಕಾಲೇಜಿನ ಮುಂಭಾಗದಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆ ಬರೆಯಲು ಪೊಲೀಸ್ ಬಂದೋಬಸ್ತ್‌ನಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ಸಾಗಿದರು –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್   

ದಾವಣಗೆರೆ: ದ್ವಿತೀಯ ಪಿಯುಸಿ ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೇ ಗುರುವಾರ ಪ್ರಾರಂಭವಾಯಿತು. ಪ್ರಥಮ ಭಾಷೆ ಕನ್ನಡ ಮತ್ತು ಸಂಸ್ಕೃತ ಪರೀಕ್ಷೆಗೆ 15,465 ವಿದ್ಯಾರ್ಥಿಗಳು ಹಾಜರಾಗಿದ್ದು, 713 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಶಿವರಾಜ್‌, ಪಾಲಿಕೆ ಉಪ ಆಯುಕ್ತರಾದ ಲಕ್ಷ್ಮೀ ಎಸ್‌. ಇನ್ನಿತರ ಅಧಿಕಾರಿಗಳು ಮೋತಿ ವೀರಪ್ಪ ಕಾಲೇಜು, ಸೀತಮ್ಮ ಕಾಲೇಜುಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು. ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ದ್ವಿತೀಯ ಪಿಯು ಪರೀಕ್ಷೆ ಸುಗಮವಾಗಿ ನಡೆದಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗಿದೆ. ನಕಲು ಪ್ರಕರಣ ಅಥವಾ ಇನ್ಯಾವುದೇ ಪ್ರಕರಣಗಳು ಆಗಿಲ್ಲ ಎಂದು ಡಿಡಿಪಿಯು ಶಿವರಾಜ್‌ ತಿಳಿಸಿದರು.

ADVERTISEMENT

ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು. ಕೊಠಡಿ ಮೇಲ್ವಿಚಾರಕರು ಮೊಬೈಲ್ ಫೋನ್, ಇನ್ನಿತರ ಆಧುನಿಕ ವಿದ್ಯುನ್ಮಾನ ಉಪಕರಣಗಳನ್ನು ಬಳಸದಂತೆ ನಿಷೇಧ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲಾಗಿದೆ ಎಂದು ಮಾಹಿತಿ ನೀಡಿದರು.

ದಾವಣಗೆರೆ ತಾಲ್ಲೂಕಿನಲ್ಲಿ 17, ಹರಿಹರ ತಾಲ್ಲೂಕಿನಲ್ಲಿ 4, ಜಗಳೂರು ತಾಲ್ಲೂಕಿನಲ್ಲಿ 3, ಚನ್ನಗಿರಿ ತಾಲ್ಲೂಕಿನಲ್ಲಿ 4, ಹೊನ್ನಾಳಿ ತಾಲ್ಲೂಕಿನಲ್ಲಿ 3 ಕೇಂದ್ರಗಳು ಒಳಗೊಂಡಂತೆ ಒಟ್ಟಾರೆ 31 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.