ADVERTISEMENT

ಎಪಿಎಂಸಿ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಅರ್ಜಿ ಸಲ್ಲಿಸಲು ನಿರ್ಧಾರ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2020, 19:32 IST
Last Updated 13 ಸೆಪ್ಟೆಂಬರ್ 2020, 19:32 IST

ದಾವಣಗೆರೆ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲು ವಿವಿಧ ಜಿಲ್ಲೆಗಳ ಎಪಿಎಂಸಿ ಅಧ್ಯಕ್ಷರು ಅಭಿಪ್ರಾಯ ವ್ಯಕ್ತಪಡಿಸಿದರು.

ಇಲ್ಲಿನ ಎಪಿಎಂಸಿ ಸಭಾಂಗಣದಲ್ಲಿ ಭಾನುವಾರ ಕೃಷಿ ಉತ್ಪನ್ನ ಸಮಿತಿ ಅಧ್ಯಕ್ಷರ ರಾಜ್ಯಮಟ್ಟದ ಸಭೆಯ ನಂತರ ಈ ತೀರ್ಮಾನ ಕೈಗೊಳ್ಳಲಾಯಿತು.

ದಾವಣಗೆರೆ ಎಪಿಎಂಸಿ ಅಧ್ಯಕ್ಷ ಎಸ್‌.ಕೆ. ಚಂದ್ರಶೇಖರ್, ‘ಬೋರ್ಡ್ ಸದಸ್ಯರು 4–5 ದಿನಗಳಲ್ಲಿ ಚರ್ಚಿಸಿ ನಿರ್ಧಾರ ಕೈಗೊಂಡು ಅಭಿಪ್ರಾಯ ತಿಳಿಸಿದರೆ ವಕೀಲ ಶಿವಪ್ರಕಾಶ್ ಸಲಹೆ ಪಡೆದು ವಿಧಾನಸಭಾ ಅಧಿವೇಶನಕ್ಕೂ ಮುನ್ನ ರಿಟ್ ಅರ್ಜಿ ಸಲ್ಲಿಸಲಾಗುವುದು. ಅದರ ಪ್ರತಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಸಚಿವರಿಗೆ ನೀಡಿ ಎಪಿಎಂಸಿಯನ್ನು ಉಳಿಸಲು ಮನವಿ ಮಾಡಲಾಗುವುದು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.