ADVERTISEMENT

ಜಗಳೂರಿನಲ್ಲಿ ಶೀಘ್ರ ಆಮ್ಲಜನಕ ಘಟಕ: ಶಾಸಕ ಎಸ್.ವಿ. ರಾಮಚಂದ್ರ

ಶಾಸಕ ಎಸ್.ವಿ. ರಾಮಚಂದ್ರ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2021, 4:27 IST
Last Updated 4 ಜೂನ್ 2021, 4:27 IST
ಜಗಳೂರಿನಲ್ಲಿ ಶಾಸಕ ಎಸ್.ವಿ. ರಾಮಚಂದ್ರ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಹಾಗೂ ಪೊಲೀಸ್ ಇಲಾಖೆಯಿಂದ ನೀಡಲಾದ ಆಮ್ಲಜನಕದ ಸಾಂದ್ರಕಗಳನ್ನು ಸಾರ್ವಜನಿಕ ಆಸ್ಪತ್ರೆಗೆ ಹಸ್ತಾಂತರಿಸಿದರು
ಜಗಳೂರಿನಲ್ಲಿ ಶಾಸಕ ಎಸ್.ವಿ. ರಾಮಚಂದ್ರ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಹಾಗೂ ಪೊಲೀಸ್ ಇಲಾಖೆಯಿಂದ ನೀಡಲಾದ ಆಮ್ಲಜನಕದ ಸಾಂದ್ರಕಗಳನ್ನು ಸಾರ್ವಜನಿಕ ಆಸ್ಪತ್ರೆಗೆ ಹಸ್ತಾಂತರಿಸಿದರು   

ಜಗಳೂರು: ತಾಲ್ಲೂಕಿನಲ್ಲಿ ವಿವಿಧ ಕಂಪನಿಗಳ ನೆರವಿನಿಂದ ₹ 80 ಲಕ್ಷ ವೆಚ್ಚದ ಆಮ್ಲಜನಕ ಉತ್ಪಾದನೆ ಘಟಕ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಶೀಘ್ರ ಆರಂಭಿಸಲಾಗುವುದು ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ 7 ಹಾಗೂ ಪೊಲೀಸ್ ಇಲಾಖೆಯಿಂದ ದೇಣಿಗೆ ನೀಡಲಾದ 2 ಆಮ್ಲಜನಕ ಸಾಂದ್ರಕಗಳನ್ನು ಬುಧವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಹಸ್ತಾಂತರಿಸಿ ಅವರು ಮಾತನಾಡಿದರು.

‘ವಿವಿಧ ಸಂಘ–ಸಂಸ್ಥೆಗಳು ಹಾಗೂ ಕಂಪನಿಗಳು ಸಂಕಷ್ಟದ ಈ ಸಂದರ್ಭದಲ್ಲಿ ಸೋಂಕಿತರ ನೆರವಿಗೆ ಧಾವಿಸಿರುವುದು ಶ್ಲಾಘನೀಯ. ಆಮ್ಲಜನಕ ಘಟಕ ನಿರ್ಮಾಣದಿಂದ ಸ್ಥಳೀಯವಾಗಿ ಆಮ್ಲಜನಕವನ್ನು ಉತ್ಪಾದನೆ ಮಾಡುವುದರಿಂದ ಎಲ್ಲರಿಗೂ ಅನುಕೂಲವಾಗಲಿದೆ. ಆರೋಗ್ಯ ಇಲಾಖೆಯ ಉತ್ತಮ ಕಾರ್ಯನಿರ್ವಹಣೆಯಿಂದ ಜಿಲ್ಲೆಯಲ್ಲಿಯೇ ನಮ್ಮ ತಾಲ್ಲೂಕಿನಲ್ಲಿ ಅತ್ಯಂತ ಕಡಿಮೆ ಸೋಂಕು ಪ್ರಕರಣಗಳು ಕಂಡುಬಂದಿವೆ’ ಎಂದರು.

ADVERTISEMENT

ಪಟ್ಟಣ ಪಂಚಾಯಿತಿ ಅಧ್ಯಕ್ಷ ಆರ್. ತಿಪ್ಪೇಸ್ವಾಮಿ, ಉಪಾಧ್ಯಕ್ಷೆ ಲಲಿತಮ್ಮ ಶಿವಣ್ಣ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನಾಗರಾಜ್, ಸಿಪಿಐ ಮಂಜುನಾಥ್ ಪಂಡಿತ್, ಪಿಎಸ್ಐ ಸಂತೋಷ್ ಬಾಗೋಜಿ, ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಸಿ. ಮಹೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.