ದಾವಣಗೆರೆ: ದಾವಣಗೆರೆ ತಾಲ್ಲೂಕು ಸೇರಿ ಜಿಲ್ಲೆಯ ಕೆಲವೆಡೆ ಬುಧವಾರ ರಾತ್ರಿ ಹಾಗೂ ಗುರುವಾರ ಸಾಧಾರಣ ಮಳೆಯಾಗಿದೆ.
ದಾವಣಗೆರೆ ತಾಲ್ಲೂಕಿನಲ್ಲಿ ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆ ಸುರಿದ ಮಳೆಗೆ 7 ಮನೆಗಳಿಗೆ ಹಾನಿಯಾಗಿದೆ. ಕೆಲ ಗ್ರಾಮಗಳಲ್ಲಿ ಬೆಳೆಹಾನಿಯಾಗಿದೆ. ಕೆಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ನಗರದ ಕೆಲ ರಸ್ತೆಗಳಲ್ಲಿ ಗುಂಡಿ ಬಿದ್ದ ಪರಿಣಾಮ ಮಳೆ ನೀರು ನಿಂತು ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಯಿತು.
ತಾಲ್ಲೂಕಿನ ಕೊಡಗನೂರಿನಲ್ಲಿ ಒಂದು, ಕುರ್ಕಿ, ಅಣಜಿಯಲ್ಲಿ ತಲಾ ಎರಡು, ಮಾಗನಗೊಂಡಹಳ್ಳಿ, ಬೆಳಗನೂರಿನಲ್ಲಿ ತಲಾ ಒಂದು ಮನೆಗಳಿಗೆ ಹಾನಿಯಾಗಿದೆ. ₹ 1.25 ಲಕ್ಷ ನಷ್ಟವಾಗಿದೆ. ಕೊಡಗನೂರಿನಲ್ಲಿ ಒಂದು ಎಕರೆಯಲ್ಲಿ ಬೆಳೆದ ಎಲೆಕೋಸು ಬೆಳೆಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯಾಮತಿ, ಮಲೇಬೆನ್ನೂರಿನಲ್ಲಿ ಸಾಧಾರಣ ಮಳೆಯಾಗಿದ್ದು, ಜಗಳೂರಿನಲ್ಲಿ ಸೋನೆ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.