ADVERTISEMENT

ದಾವಣಗೆರೆಯಲ್ಲಿ ಜಿಟಿಜಿಟಿ ಮಳೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2023, 12:41 IST
Last Updated 3 ಜುಲೈ 2023, 12:41 IST
   

ದಾವಣಗೆರೆ: ನಗರ ಸೇರಿ ಜಿಲ್ಲೆಯಾದ್ಯಂತ ಸೋಮವಾರ ಜಿಟಿಜಿಟಿ ಮಳೆ ಸುರಿಯಿತು. ನಗರದಲ್ಲಿ ಬೆಳಿಗ್ಗೆಯಿಂದಲೂ ಮೋಡಕವಿದ ವಾತಾವರಣವಿತ್ತು. ಆಗಾಗ ತುಂತುರು ಮಳೆಯೂ ಸುರಿಯಿತು. ನಗರದಲ್ಲಿ ಸಂಜೆ 4ಕ್ಕೆ ಅರ್ಧಗಂಟೆಗೂ ಹೆಚ್ಚು ಕಾಲ ಬಿರುಸು ಪಡೆಯಿತು. ಸಂಜೆಯವರೆಗೂ ಸಣ್ಣ ಪ್ರಮಾಣದಲ್ಲಿ ಸುರಿಯಿತು.

ಹರಿಹರ, ಜಗಳೂರು ಚನ್ನಗಿರಿ ತಾಲ್ಲೂಕಿನ ತ್ಯಾವಣಿಗೆ, ಸಂತೇಬೆನ್ನೂರು ಭಾಗಗಳಲ್ಲಿ ಮಳೆಯಾಗಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿವೆ. ಕೆಲವೆಡೆ ಮೆಕ್ಕೆಜೋಳ ಬಿತ್ತನೆಯಾಗಿದ್ದರೆ, ಕೆಲವು ಕಡೆ ರೈತರು ಸಿದ್ಧತೆ ಮಾಡಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT