ಬಸವಾಪಟ್ಟಣ: ಗ್ರಾಮ ಹಾಗೂ ಸುತ್ತಮುತ್ತ ಭಾನುವಾರ ಇಡೀ ರಾತ್ರಿ ಸುರಿದ ಮಳೆಯ ಪರಿಣಾಮವಾಗಿ ಇಲ್ಲಿನ ಮುಖ್ಯ ರಸ್ತೆಯಲ್ಲಿ ಭಾರಿ ಗಾತ್ರದ ನೀಲಗಿರಿ ಮರ ಹಾಗೂ ನಾಲ್ಕು ವಿದ್ಯುತ್ ಕಂಬಗಳು ಉರುಳಿಬಿದ್ದಿವೆ.
ಇದರಿಂದಾಗಿ ಸುಮಾರು ಮೂರು ಗಂಟೆಗಳ ಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ಬಸವಾಪಟ್ಟಣ ಸೇರಿ ಹಲವು ಗ್ರಾಮಗಳಲ್ಲಿ ವಿದ್ಯುತ್ ಸ್ಥಗಿತಗೊಂಡಿತ್ತು.
ಸುದ್ದಿ ತಿಳಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಜಿ.ಸಚಿನ್ ಅವರು ಕೂಲಿಕಾರರ ನೆರವಿನಿಂದ ರಸ್ತೆಗೆ ಅಡ್ಡವಾಗಿದ್ದ ಮರವನ್ನು ಕತ್ತರಿಸಿ ತೆರವುಗೊಳಿಸಲು ನೆರವಾದರು. ನಂತರ ಬೆಸ್ಕಾಂ ಶಾಖಾಧಿಕಾರಿ ನಾಗರಾಜನಾಯ್ಕ ನೇತೃತ್ವದಲ್ಲಿ ಕಾರ್ಯ ನಿರತರಾದ ಸಿಬ್ಬಂದಿ ಕ್ಷಿಪ್ರಗತಿಯಲ್ಲಿ ಕಾರ್ಯಾಚರಣೆ ಕೈಗೊಂಡು ಮುರಿದು ಬಿದ್ದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ, ಹೊಸ ಕಂಬಗಳನ್ನು ಮತ್ತು ತಂತಿಗಳನ್ನು ಅಳವಡಿಸಿ ಮಧ್ಯಾಹ್ನ ಒಂದು ಗಂಟೆಗೆ ವಿದ್ಯುತ್ ಸರಬರಾಜನ್ನು ಸುಲಲಿತಗೊಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.