ಕಡರನಾಯ್ಕನಹಳ್ಳಿ: ನಿರಂತರ ಮಳೆಯಿಂದಾಗಿ ಸಮೀಪದ ಉಕ್ಕಡಗಾತ್ರಿ ಬಳಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ನದಿ ಹಿನ್ನೀರಿನಲ್ಲಿ ಹೊಲ, ಗದ್ದೆ, ತೋಟಗಳು ಜಲಾವೃತಗೊಂಡಿರುವುದರಿಂದ ರೈತರು ಕಣ್ಣೀರು ಹಾಕುವಂತಾಗಿದೆ.
ಉಕ್ಕಡಗಾತ್ರಿ ಅಜ್ಜಯ್ಯನ ದೇವಸ್ಥಾನದ ಸ್ನಾನ ಘಟ್ಟ ಮುಳುಗಡೆಯಾಗಿದೆ. ದೇವಸ್ಥಾನದ ಇಕ್ಕೆಲಗಳಲ್ಲಿ ಇದ್ದ ಅಂಗಡಿಗಳೂ ಜಲಾವೃತವಾಗಿವೆ.
ತರಕಾರಿ ಬೆಳೆಗಳು, ಭತ್ತ, ಅಡಿಕೆ ತೋಟಗಳಲ್ಲಿ ನೀರು ನಿಂತಯಿದ್ದು, ಪ್ರವಾಹದ ಭೀತಿ ಆವರಿಸಿದೆ. ನೂರಕ್ಕೂ ಹೆಚ್ಚು ಎಕರೆ ಭೂಮಿಯಲ್ಲಿ ನೀರು ನಿಂತುದ್ದು, ನೀರಿನ ಪ್ರಮಾಣ ಬೇಗ ಕಡಿಮೆಯಾಗಬೇಕು. ಇಲ್ಲದಿದ್ದರೆ ತೋಟಗಳು ಉಳಿಯುವುದಿಲ್ಲ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಕರಿಬಸವೇಶ್ವರ ಅಜ್ಜಯ್ಯನ ಗದ್ದುಗೆ ದರ್ಶನಕ್ಕೆ ಬಂದ ಭಕ್ತರು ಗೇಟಿನ ಒಳಗೆ ಸ್ನಾನ ಮಾಡಿ ನಂತರ ದರ್ಶನ ಪಡೆಯುತ್ತಿದ್ದಾರೆ. ದೇವಸ್ಥಾನದ ವತಿಯಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.