ADVERTISEMENT

ದಾವಣಗೆರೆ | ಮಳೆಹಾನಿ: ₹ 8 ಕೋಟಿ ಅನುದಾನ- ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 6:20 IST
Last Updated 22 ಆಗಸ್ಟ್ 2025, 6:20 IST
<div class="paragraphs"><p>ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾಧಿಕಾರಿ</p></div>

ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾಧಿಕಾರಿ

   

ದಾವಣಗೆರೆ: ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದರಿಂದ ಉಂಟಾಗಿರುವ ಹಾನಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ₹ 8 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

‘ವಾಡಿಕೆಯಂತೆ ಜಿಲ್ಲೆಯಲ್ಲಿ ಈವರೆಗೆ 25 ಸೆಂ.ಮೀ ಮಳೆಯಾಗಬೇಕಿತ್ತು. ವಾಸ್ತವವಾಗಿ 35 ಸೆಂ.ಮೀ ಮಳೆಯಾಗಿದೆ. ಕೊಂಡಜ್ಜಿ ಕೆರೆ ಸೇರಿ ಬಹುತೇಕ ಕೆರೆಗಳು ಭರ್ತಿಯಾಗಿವೆ. ತುಂಗ ಮತ್ತು ಭದ್ರಾ ಜಲಾಶಯಗಳಿಂದ ನೀರು ಹೊರಬಿಟ್ಟ ಪರಿಣಾಮ ತುಂಗಭದ್ರಾ ನದಿಯಲ್ಲಿ 1 ಲಕ್ಷ ಕ್ಯೂಸೆಕ್‌ ನೀರು ಹರಿಯುತ್ತಿದೆ’ ಎಂದು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ADVERTISEMENT

‘ಮಳೆಯಿಂದ ತೀವ್ರ ಹಾನಿ ಉಂಟಾಗಿದ್ದ 26 ಮನೆಗಳಿಗೆ ತಲಾ ₹ 1.20 ಲಕ್ಷ ಹಾಗೂ ಭಾಗಶಃ ಹಾನಿಯಾಗಿರುವ ಮನೆಗಳಿಗೆ ₹ 50 ಸಾವಿರ ಪರಿಹಾರ ನೀಡಲಾಗಿದೆ. ಜಿಲ್ಲಾಧಿಕಾರಿ ಖಾತೆಯಲ್ಲಿ ₹ 17 ಕೋಟಿ ಹಾಗೂ ತಹಶೀಲ್ದಾರ್‌ ಖಾತೆಗಳಲ್ಲಿ ₹ 26 ಕೋಟಿ ಲಭ್ಯವಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.