ADVERTISEMENT

ಮೀಸಲಾತಿ ಹೆಚ್ಚಳಕ್ಕೆ ದನಿ ಎತ್ತುವೆ: ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2022, 5:56 IST
Last Updated 12 ಸೆಪ್ಟೆಂಬರ್ 2022, 5:56 IST
ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ನ್ಯಾಮತಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಶನಿವಾರ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಮನವಿ ಸಲ್ಲಿಸಿದರು
ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ನ್ಯಾಮತಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಶನಿವಾರ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಮನವಿ ಸಲ್ಲಿಸಿದರು   

ನ್ಯಾಮತಿ: ‘ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಸೋಮವಾರದಿಂದ ಆರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತುವೆ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಭರವಸೆ ನೀಡಿದರು.

ಪಟ್ಟಣದಲ್ಲಿ ಶನಿವಾರ ಕರ್ನಾಟಕ ಸ್ವಾಭಿಮಾನಿ ಎಸ್‌ಸಿ-ಎಸ್‌ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ, ನ್ಯಾಮತಿ ತಾಲ್ಲೂಕು ವಾಲ್ಮೀಕಿ ಸಮುದಾಯದ ಮುಖಂಡರಿಂದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

‘ಮೀಸಲಾತಿ ಹೆಚ್ಚಳ ಪ್ರಸ್ತಾವಕ್ಕೆ ಬಿ.ಎಸ್.ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರು ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿಗೆ ಭರವಸೆ ನೀಡಿದ್ದಾರೆ. ಅಧಿವೇಶನದಲ್ಲಿ ಪ್ರಸ್ತಾಪ ಮಾಡುವೆ’ ಎಂದರು.

ADVERTISEMENT

ನ್ಯಾಮತಿ ತಾಲ್ಲೂಕು ವಾಲ್ಮೀಕಿ ನಾಯಕ ಸಮುದಾಯದ ಅಧ್ಯಕ್ಷ ಬಿ. ಸೋಮಶೇಖರ ಮತ್ತು ಪದಾಧಿಕಾರಿಗಳು ಹಾಗೂ ವಿವಿಧ ಗ್ರಾಮಗಳ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.