ಚನ್ನಗಿರಿ: ‘ತಾಲ್ಲೂಕು ಆಡಳಿತ ,ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಿವಿಧ ಕನ್ನಡಪರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನ. 1ರಂದು ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ 70 ನೇ ಕರ್ನಾಟಕ ರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲಾಗುವುದು’ ಎಂದು ತಹಶೀಲ್ದಾರ್ ಎನ್.ಜೆ. ನಾಗರಾಜ್ ತಿಳಿಸಿದ್ದಾರೆ.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ನ. 1ರಂದು ಪಟ್ಟಣದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರದೊಂದಿಗೆ ವಿವಿಧ ಕಲಾ ತಂಡಗಳು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ಭವ್ಯವಾದ ಮೆರವಣಿಗೆಯನ್ನು ನಡೆಸಲಾಗುವುದು. ಎಲ್ಲ ಇಲಾಖೆಗಳ ಅಧಿಕಾರಿ ವರ್ಗ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ನಾಲ್ಕು ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಹಾಗೆಯೇ ಎಲ್ಲ ಇಲಾಖೆಗಳ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗುವುದು’ ಎಂದರು.
ಕನ್ನಡ ಸಾಹಿತ್ ಪರಿಷತ್ ಅಧ್ಯಕ್ಷ ಎಲ್.ಜಿ. ಮಧುಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಎಸ್. ಗಣೇಶ್, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ, ಜಿ. ಚಿನ್ನಸ್ವಾಮಿ, ಗೌ.ಹಾಲೇಶ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಮಲ್ಲಾನಾಯ್ಕ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.