ಹೊನ್ನಾಳಿ: ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೊಳ್ಳುತ್ತಿದ್ದು, ಇದು ಪ್ರತಿಯೊಬ್ಬ ಭಾರತೀಯರ ಸುದೈವವಾಗಿದೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ರಾಮಮಂದಿರದ ವಿಷಯದಲ್ಲಿ ಕರ್ನಾಟಕದ ಕೊಡುಗೆ ಆಪಾರವಾಗಿದ್ದು, ಮೈಸೂರಿನ ಶಿಲ್ಪಿ ಅರುಣ್ ಯೋಗರಾಜ್ ಕೊಡುಗೆ ಶ್ಲಾಘನೀಯ ಎಂದು ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಘ ಪರಿವಾರದ ನೂರಾರು ವರ್ಷಗಳ ಹೋರಾಟ, ತ್ಯಾಗ ಬಲಿದಾನದ ಫಲವಾಗಿ ರಾಮಲಲ್ಲಾನ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿದೆ. ಆದರೆ, ಕಾಂಗ್ರೆಸ್ ಮುಖಂಡರು ಈ ಕಾರ್ಯಕ್ರಮವನ್ನು ಟೀಕಿಸುತ್ತಿದ್ದು, ಸರಿಯಲ್ಲ ಎಂದು ಹೇಳಿದರು.
ಅವಳಿ ತಾಲ್ಲೂಕಿನ ದೇವಾಲಯಗಳಲ್ಲಿ ಸ್ವಚ್ಛತೆ ಕೈಗೊಳ್ಳುವ ಮೂಲಕ ವಿಶೇಷ ಪೂಜೆ ನಡೆಸಬೇಕು. ಸೋಮವಾರ ಸಂಜೆ ಪ್ರತಿಯೊಬ್ಬರೂ ಉತ್ತರಕ್ಕೆ ಮುಖಮಾಡಿ 5 ದೀಪಗಳನ್ನು ಹಚ್ಚಿ ಆರತಿ ಬೆಳಗಬೇಕು ಹಾಗೂ ಪ್ರಸಾದದ ವ್ಯವಸ್ಥೆ ಮಾಡಬೇಕು ಎಂದು ಜನರಲ್ಲಿ ಮನವಿ ಮಾಡಿದರು.
ಜ.22ರಂದು ಮದ್ಯ, ಮಾಂಸ ಮಾರಾಟವನ್ನು ಸರ್ಕಾರ ನಿಷೇಧಿಸಬೇಕು, ಕೇಂದ್ರ ಸರ್ಕಾರ ಈಗಾಗಲೇ ಅರ್ಧ ದಿನ ರಜೆ ಘೋಷಿಸಿದ್ದು, ರಾಜ್ಯ ಸರ್ಕಾರ ಕೂಡ ರಜೆ ಘೋಷಣೆ ಮಾಡುವ ಮೂಲಕ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ರಾಜ್ಯದ ಜನರು ಮನೆಗಳಲ್ಲಿ ಕುಳಿತು ಟಿ.ವಿ ಮೂಲಕ ವೀಕ್ಷಿಸಲು ಅವಕಾಶ ಮಾಡಿಕೊಡಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.