ಹರಿಹರ: ಬಾಳೆಹೊನ್ನೂರು ರಂಭಾಪುರಿ ಶ್ರೀಗಳ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಜಾಗೃತಿ ಸಮಾರಂಭವನ್ನು ಜುಲೈ 14ರಿಂದ 16ರವರೆಗೆ ನಗರದ ದೇವಸ್ಥಾನ ರಸ್ತೆಯ ಹಳೆಪೇಟೆ ಬಸವೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಆಯೋಜಿಸಲಾಗಿದೆ.
ಜು. 14ರ ಬೆಳಿಗ್ಗೆ 6.30ರಿಂದ 11ರವರೆಗೆ ವೀರಸೋಮೇಶ್ವರ ರಾಜದೇಶಿಕೇಂದ್ರ ಶ್ರೀಗಳ ಇಷ್ಟಲಿಂಗ ಮಹಾಪೂಜೆ, ನಂತರ ಭಕ್ತರಿಗೆ ಪ್ರಸಾದ ವ್ಯವಸ್ಥೆ, ಸಂಜೆ 6ಕ್ಕೆ ಶ್ರೀಗಳ ಸಾನ್ನಿಧ್ಯದಲ್ಲಿ ಧರ್ಮ ಜಾಗೃತಿ ಸಭೆ ನಡೆಯಲಿದೆ.
ತೀರ್ಥಹಳ್ಳಿ ಮಳಲಿಮಠದ ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸುವರು. ಶಾಸಕ ಬಿ.ಪಿ.ಹರೀಶ್ ಉದ್ಘಾಟಿಸುವರು. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕ ಪ್ರಕಾಶ್ ಕೋಳಿವಾಡ, ತಹಶೀಲ್ದಾರ್ ಕೆ.ಎಂ.ಗುರುಬಸವರಾಜ, ಸಿರಿಗೆರೆಯ ಎನ್.ಜಿ.ನಾಗನಗೌಡರು, ಕಾಂಗ್ರೆಸ್ ಯುವ ಮುಖಂಡ ಹಾಲೇಶ್‌ಗೌಡ ಬಿ., ರೇಣುಕಾಚಾರ್ಯ ಮಂದಿರ ಕಾರ್ಯಾಧ್ಯಕ್ಷ ಜುಂಜಪ್ಪ ಹೆಗ್ಗಪ್ಪನವರ್, ಉಪನ್ಯಾಸಕ ವಜ್ರೇಶ್ ಕೆ.ಕೆ. ಅತಿಥಿಯಾಗಿ ಭಾಗವಹಿಸುವರು.
ಜು. 15ರ ಸಂಜೆ 6.30ರ ಧರ್ಮ ಜಾಗೃತಿ ಸಭೆಯಲ್ಲಿ ಹರಪನಹಳ್ಳಿಯ ತೆಗ್ಗಿನಮಠ ಸಂಸ್ಥಾನದ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಶಾಸಕಿ ಲತಾ ಮಲ್ಲಿಕಾರ್ಜುನ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಚಿದಾನಂದಪ್ಪ, ತಪೋವನ ಸಂಸ್ಥೆ ಮುಖ್ಯಸ್ಥ ಶಶಿಕುಮಾರ್ ಮೆರ‍್ವಾಡೆ ಭಾಗವಹಿಸುವರು.
ಜು. 16ರ ಸಂಜೆ 6.30ರ ಧರ್ಮ ಜಾಗೃತಿ ಸಭೆಯಲ್ಲಿ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಶ್ರೀಗಳು, ಅವಧೂತ ಕವಿ ಗುರುರಾಜ ಗುರೂಜಿ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ, ಮಾಜಿ ಶಾಸಕ ಅರುಣ್ ಪೂಜಾರ, ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ, ವೀರಶೈವ ಮಹಾಸಭಾ ಹರಿಹರ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಜಿ. ಶಿವಾನಂದಪ್ಪ, ನಗರಸಭೆ ಮಾಜಿ ಸದಸ್ಯ ಡಿ.ಹೇಮಂತರಾಜ್, ಜವಳಿ ಸಮಾಜದ ಹರಿಹರ ತಾಲ್ಲೂಕು ಘಟಕದ ಅಧ್ಯಕ್ಷ ಕೊಂಡಜ್ಜಿ ಈಶ್ವರಪ್ಪ ಭಾಗವಹಿಸುವರು.
ವಿವಿಧ ಕ್ಷೇತ್ರದ ಸಾಧಕರಿಗೆ ಹಾಗೂ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು ಎಂದು ರೇಣುಕಾ ಮಂದಿರ ದೇವಸ್ಥಾನದ ಕಾರ್ಯದರ್ಶಿ ಪಂಚಾಕ್ಷರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.