ADVERTISEMENT

ರಂಭಾಪುರಿ ಶ್ರೀ ಅದ್ದೂರಿ ಪುರಪ್ರವೇಶ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2019, 10:40 IST
Last Updated 29 ಸೆಪ್ಟೆಂಬರ್ 2019, 10:40 IST
ದಾವಣಗೆರೆಯಲ್ಲಿ ಬಾಳೆಹೊನ್ನೂರು ರಂಭಾಪುರಿ ಸ್ವಾಮೀಜಿಗಳ ಶರನ್ನವರಾತ್ರಿ ದಸರಾ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ರಂಭಾಪುರಿ ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅವರ ಪುರಪ್ರವೇಶ ಅದ್ದೂರಿಯಾಗಿ ಶನಿವಾರ ನಡೆಯಿತು.
ದಾವಣಗೆರೆಯಲ್ಲಿ ಬಾಳೆಹೊನ್ನೂರು ರಂಭಾಪುರಿ ಸ್ವಾಮೀಜಿಗಳ ಶರನ್ನವರಾತ್ರಿ ದಸರಾ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ರಂಭಾಪುರಿ ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅವರ ಪುರಪ್ರವೇಶ ಅದ್ದೂರಿಯಾಗಿ ಶನಿವಾರ ನಡೆಯಿತು.   

ದಾವಣಗೆರೆ: ಬಾಳೆಹೊನ್ನೂರು ರಂಭಾಪುರಿ ಸ್ವಾಮೀಜಿಗಳ ಶರನ್ನವರಾತ್ರಿ ದಸರಾ ಸಮ್ಮೇಳನವು 33 ವರ್ಷಗಳ ಬಳಿಕ ನಗರದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ರಂಭಾಪುರಿ ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅವರ ಪುರಪ್ರವೇಶ ಅದ್ದೂರಿಯಾಗಿ ಶನಿವಾರ ನಡೆಯಿತು.

ಸ್ವಾಮೀಜಿ ನಗರದೇವತೆ ದುರ್ಗಾಂಬಿಕಾ ದೇವಿಗೆ ಪೂಜೆ ಸಲ್ಲಿಸಿದರು. ಶಾಸಕ ಶಾಮನೂರು ಶಿವಶಂಕರಪ್ಪ, ದೇವರಮನೆ ಶಿವಕುಮಾರ್‌, ಗೌಡ್ರ ಚನ್ನಬಸಪ್ಪ, ಆವರಗೊಳ್ಳ ಪುರವರ್ಗ ಹಿರೇಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ ಅವರು ಸ್ವಾಮೀಜಿಯನ್ನು ಬರಮಾಡಿಕೊಂಡರು.

ಬಳಿಕ ಸಾರೋಟದಲ್ಲಿ ಕೂರಿಸಿ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಪಿ.ಬಿ. ರೋಡ್‌ನಲ್ಲಿರುವ ರೇಣುಕ ಮಂದಿರಕ್ಕೆ ಕರೆ ತರಲಾಯಿತು. ವಿವಿಧ ವಾದ್ಯ ತಂಡಗಳು, ಆನೆ, ಪೂರ್ಣಕುಂಭ, ಕಲಶಗಳು ಮೆರವಣಿಗೆಗೆ ಮೆರುಗು ನೀಡಿದವು. ವಿವಿಧ ಮಠಗಳ ಸ್ವಾಮೀಜಿಗಳು, ಸಮ್ಮೇಳನದ ಸಂಘಟನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ADVERTISEMENT

ರಂಭಾಪುರಿ ಸ್ವಾಮೀಜಿ ಮಾತನಾಡಿ, ‘ಮಹಾನಗರದಲ್ಲಿ 10 ದಿನಗಳ ಕಾಲ ದಸರ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ, ಭಕ್ತಿ ಶ್ರದ್ಧೆಯಿಂದ ನಡೆಸುವ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. 33 ವರ್ಷಗಳ ಹಿಂದೆ ವೀರಗಂಗಾಧರ ಸ್ವಾಮೀಜಿಯ ಸಂಕಲ್ಪದಂತೆ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಇಲ್ಲಿ ದಸರಾ ಮಹೋತ್ಸವ ನಡೆಸಿದ್ದರು’ ಎಂದು ನೆನಪಿಸಿಕೊಂಡರು.

ಮೈಸೂರು ದಸರಾ ವಿಶ್ವವಿಖ್ಯಾತವಾದುದು. ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ನಡೆಯುವ ಗುರುಮನೆ ದಸರಾ ಮಹೋತ್ಸವವೂ ಅತ್ಯಂತ ಜನಜನಿತವಾದುದು. ಅದು ಈ ಬಾರಿ ದಾವಣಗೆರೆಯಲ್ಲಿ ನಡೆಯುತ್ತಿದ್ದು, ವಿನೂತನ ಮತ್ತು ಐತಿಹಾಸಿಕವಾಗಿದೆ. ಈ ದಸರಾ ಮಹೋತ್ಸವದಲ್ಲಿ ಎಲ್ಲ ಜಾತಿ, ಮತ, ಪಂಥಗಳನ್ನು ಮೀರಿ ಜನರು ಪಾಲ್ಗೊಳ್ಳುತ್ತಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.