
ಪ್ರಜಾವಾಣಿ ವಾರ್ತೆ(ಸಾಂದರ್ಭಿಕ ಚಿತ್ರ)
ಗೆಟ್ಟಿ ಚಿತ್ರ
ರಾಣೆಬೆನ್ನೂರು: ತಾಲ್ಲೂಕಿನ ಹೆಡಿಯಾಲ ಗ್ರಾಮದ ಸಮೀಪ ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ದಾವಣಗೆರೆ ತಾಲ್ಲೂಕಿನ ಪುಗಟಗೇರಿ ಗ್ರಾಮದ ಯುವಕ ಆಕಾಶ ತಿಪ್ಪೇಶ ನಾಯಕ (17) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ಜರುಗಿದೆ.
ಈ ಕುರಿತು ಹಲಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಯುವಕ ಹೆಡಿಯಾಲ ಸಮೀಪದ ಪಾಲಿಹೌಸ್ ನಿರ್ಮಿಸುವ ಕೆಲಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.