ADVERTISEMENT

ಅತ್ಯಾಚಾರ: ಅಪರಾಧಿಗೆ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2020, 21:00 IST
Last Updated 20 ಜನವರಿ 2020, 21:00 IST

ದಾವಣಗೆರೆ: 14 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಯುವಕನಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಹಾಗೂ ಪೋಕ್ಸೊ ವಿಶೇಷ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ ಹಾಗೂ ₹ 25 ಸಾವಿರ ದಂಡ ವಿಧಿಸಿದೆ.

ದಾವಣಗೆರೆ ಕಿರಣ್‌ (21) ಶಿಕ್ಷೆಗೊಳಗಾದ ಅಪರಾಧಿ. 2018ರ ನವೆಂಬರ್‌ನಲ್ಲಿ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಪೊಲೀಸ್‌ ವೃತ್ತ ನಿರೀಕ್ಷಕಿ ನಾಗಮ್ಮ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಸ್. ನಾಗಶ್ರೀ ಆರೋಪ ಸಾಬೀತಾಗಿದೆ ಎಂದು ಸೋಮವಾರ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶೌಕತ್ ಅಲಿ ಎಸ್.ಎಚ್.ಎಸ್. ವಾದ ಮಂಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.