ಜೈಲು (ಪ್ರಾತಿನಿಧಿಕ ಚಿತ್ರ)
ದಾವಣಗೆರೆ: ಪುಸಲಾಯಿಸಿ 15 ವರ್ಷದ ಬಾಲಕಿಯನ್ನು ಮದುವೆಯಾಗಿ ಅತ್ಯಾಚಾರ ಎಸಗಿದ ಅಪರಾಧಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 21 ವರ್ಷ ಜೈಲು ಹಾಗೂ ₹ 30,000 ದಂಡ ವಿಧಿಸಿ ಆದೇಶಿಸಿದೆ.
ಹರಿಹರ ನಗರದ ಸಚಿನ್ (23) ಶಿಕ್ಷೆಗೆ ಗುರಿಯಾದ ಅಪರಾಧಿ. ಸಂತ್ರಸ್ತ ಬಾಲಕಿಗೆ ಸರ್ಕಾರ ₹ 5 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಆದೇಶದಲ್ಲಿ ಶಿಫಾರಸು ಮಾಡಿದ್ದಾರೆ.
ದಾವಣಗೆರೆಯ ಶಾಲೆಯೊಂದರಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ 2022ರ ಡಿ.21ರಂದು ಕಾಣೆಯಾಗಿದ್ದರು. ನಾಪತ್ತೆ ದೂರು ದಾಖಲಿಸಿಕೊಂಡ ಮಹಿಳಾ ಠಾಣೆಯ ಪೊಲೀಸರು, ಬಾಲಕಿ ಚಿಕ್ಕಮಗಳೂರಿನ ಗ್ರಾಮವೊಂದರಲ್ಲಿ ವಿವಾಹವಾಗಿದ್ದನ್ನು ಪತ್ತೆ ಮಾಡಿದ್ದರು. ಪುಸಲಾಯಿಸಿ ಮದುವೆಯಾದ ಸಚಿನ್, ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದು ತನಿಖೆಯಿಂದ ದೃಢಪಟ್ಟಿತ್ತು.
ತನಿಖಾಧಿಕಾರಿಯಾಗಿದ್ದ ಡಿವೈಎಸ್‌ಪಿ ಮಲ್ಲೇಶ್ ದೊಡ್ಡಮನಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಕೀಲೆ ಸುನಂದಾ ಮಡಿವಾಳರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.