ADVERTISEMENT

ಬಾನುವಳ್ಳಿಯಲ್ಲಿ ಸೋಮವಾರ ರಾಯಣ್ಣ ಪ್ರತಿಮೆ ಅನಾವರಣ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2023, 14:31 IST
Last Updated 17 ನವೆಂಬರ್ 2023, 14:31 IST
ರಾಯಣ್ಣನ ಪ್ರತಿಮೆ
ರಾಯಣ್ಣನ ಪ್ರತಿಮೆ   

ಕಡರನಾಯ್ಕನಹಳ್ಳಿ: ಬಾನುವಳ್ಳಿ ಗ್ರಾಮದಲ್ಲಿ ನ.20ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳ್ಳಲಿದೆ. ಅಂದು ಬೆಳಗ್ಗೆ 9 ಗಂಟೆಗೆ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ಬೆಳಗಾವಿ ಜಿಲ್ಲೆ ರಾಯಭಾಗ ತಾಲ್ಲೂಕಿನ ಸೋಮಲಿಂಗೇಶ್ವರ ದೇವಋಷಿ ನಿಪನಾಳ ಗುರುಗಳು ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ. ಜಿ.ಬಿ ವಿನಯ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಮೆರವಣಿಗೆಗೆ ಮಾಜಿ ಶಾಸಕ ಎಸ್. ರಾಮಪ್ಪ ಚಾಲನೆ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

ಕಾರ್ಯಕ್ರಮದ ಅಂಗವಾಗಿ ಭಾನುವಾರ ಬೆಳಗ್ಗೆ 9 ಗಂಟೆಯಿಂದ ರಾಯಣ್ಣ ಪ್ರತಿಮೆಯನ್ನು ಗ್ರಾಮದಲ್ಲಿ ವಿಜೃಂಭಣೆಯಿಂದ ಮೆರವಣಿಗೆ ಮಾಡಲಾಗುತ್ತದೆ. ರಾತ್ರಿ 8 ಗಂಟೆಗೆ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.