ADVERTISEMENT

ಸರ್ಕಾರಿ ನೌಕರರ ಕ್ರಿಕೆಟ್: ಆರ್‌ಡಿಪಿಆರ್ ಇಲಾಖೆ ತಂಡ ಪ್ರಥಮ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2026, 4:30 IST
Last Updated 10 ಫೆಬ್ರುವರಿ 2026, 4:30 IST
ಹೊನ್ನಾಳಿ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆಯೋಜಿಸಲಾಗಿದ್ದ ಕ್ರಿಕೆಟ್ ಟೂರ್ನಿಯಲ್ಲಿ ಪ್ರಥಮ ಸ್ಥಾನ ಪಡೆದ ಆರ್‌ಡಿಪಿಆರ್ ಇಲಾಖೆಯ ತಂಡಕ್ಕೆ ಟ್ರೋಫಿ ವಿತರಿಸಲಾಯಿತು
ಹೊನ್ನಾಳಿ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆಯೋಜಿಸಲಾಗಿದ್ದ ಕ್ರಿಕೆಟ್ ಟೂರ್ನಿಯಲ್ಲಿ ಪ್ರಥಮ ಸ್ಥಾನ ಪಡೆದ ಆರ್‌ಡಿಪಿಆರ್ ಇಲಾಖೆಯ ತಂಡಕ್ಕೆ ಟ್ರೋಫಿ ವಿತರಿಸಲಾಯಿತು   

ಹೊನ್ನಾಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹೊನ್ನಾಳಿ ಶಾಖೆಯಿಂದ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯಲ್ಲಿ ಆರ್‌ಡಿಪಿಆರ್ ಇಲಾಖೆ ತಂಡ ಪ್ರಥಮ ಸ್ಥಾನ ಗಳಿಸಿ ಟ್ರೋಫಿ ತನ್ನದಾಗಿಸಿಕೊಂಡಿತು.

ಸೋಮವಾರ ಪಟ್ಟಣದ ಸಿದ್ದರಾಮಯ್ಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ನಡೆದ ಫೈನಲ್‌ ಪಂದ್ಯದಲ್ಲಿ ಆರೋಗ್ಯ ಇಲಾಖೆಯ ತಂಡವನ್ನು ಮಣಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಡಿಪಿಆರ್ ತಂಡ 61 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಆರೋಗ್ಯ ಇಲಾಖೆ ತಂಡ ಕೇವಲ 41 ರನ್ ಗಳಿಸಿ, 19 ರನ್‌ಗಳಿಂಡ ಪರಾಭವಗೊಂಡಿತು.

ಗಣರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಟೂರ್ನಿಯಲ್ಲಿ ಸೆಮಿ ಫೈನಲ್‌ವರೆಗೂ ಪಂದ್ಯಗಳನ್ನು ಆಡಿಸಲಾಗಿತ್ತು, ಸೆಮಿ ಫೈನಲ್ ಹಾಗೂ ಫೈನಲ್ ಪಂದ್ಯಗಳನ್ನು ಸೋಮವಾರ ಆಡಿಸಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೆ. ಅರುಣ್ ಹೇಳಿದರು. 

ADVERTISEMENT

‘ಮುಂಬರುವ ಗಣರಾಜ್ಯೋತ್ಸವದಿಂದ ಕ್ರಿಕೆಟ್ ಟೂರ್ನಿ ಜೊತೆಗೆ ಎರಡು ದಿನ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಎಚ್.ಕೆ. ಚಂದ್ರಶೇಖರ್, ಜಿಲ್ಲಾ ಘಟಕದ ಸಹ ಕಾರ್ಯದರ್ಶಿ ದೊಡ್ಡೇಶ್, ರಾಜ್ಯ ಪರಿಷತ್ ಸದಸ್ಯ ರವಿ, ಹಿರಿಯ ಉಪಾಧ್ಯಕ್ಷರಾದ ರಾಜಾರಾಂ, ನಿರ್ದೇಶಕರಾದ ಶಿವಪದ್ಮ, ಡಿ.ಟಿ. ಚಂದ್ರಪ್ಪ, ಸಂಘಟನಾ ಕಾರ್ಯದರ್ಶಿ ಕೆ.ಪ್ರಕಾಶ್‍ನಾಯ್ಕ, ಸಾಂಸ್ಕೃತಿಕ ಕಾರ್ಯದರ್ಶಿ ಕುಮಾರ್‌ ಬಾರ್ಕಿ, ಮಂಜುನಾಥ್, ಕ್ರೀಡಾ ಕಾರ್ಯದರ್ಶಿ ಬಸವರಾಜ್, ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.