ADVERTISEMENT

ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ: ಶಾಸಕ ಎಂ.ಪಿ.ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 26 ಜೂನ್ 2021, 4:08 IST
Last Updated 26 ಜೂನ್ 2021, 4:08 IST
ಹೊನ್ನಾಳಿ ತಾಲ್ಲೂಕಿನ ಬಸವನಹಳ್ಳಿ ಗ್ರಾಮದ ಬಾಲಕಿಯೊಬ್ಬಳು ಕೊರೊನಾದಿಂದ ಗುಣಮುಖಳಾಗಿ ಗ್ರಾಮಕ್ಕೆ ತೆರಳುವ ಮುನ್ನ ಶಾಸಕ ರೇಣುಕಾಚಾರ್ಯ ಅವರು ಬಾಲಕಿಯನ್ನು ಸಂತೈಸಿದರು.
ಹೊನ್ನಾಳಿ ತಾಲ್ಲೂಕಿನ ಬಸವನಹಳ್ಳಿ ಗ್ರಾಮದ ಬಾಲಕಿಯೊಬ್ಬಳು ಕೊರೊನಾದಿಂದ ಗುಣಮುಖಳಾಗಿ ಗ್ರಾಮಕ್ಕೆ ತೆರಳುವ ಮುನ್ನ ಶಾಸಕ ರೇಣುಕಾಚಾರ್ಯ ಅವರು ಬಾಲಕಿಯನ್ನು ಸಂತೈಸಿದರು.   

ಹೊನ್ನಾಳಿ: ಕೊರೊನಾ ಮೂರನೇ ಅಲೆಯನ್ನು ಎದುರಿಸಲು ಸಿದ್ಧತೆ ಮಾಡಿಕೊಂಡಿದ್ದು, ಅದಕ್ಕಾಗಿ ಅವಳಿ ತಾಲ್ಲೂಕಿನಲ್ಲಿ ಒಟ್ಟು ಎರಡು ಸಾವಿರ ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ತಾಲ್ಲೂಕಿನ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್‌ನಿಂದ ಗುಣಮುಖರಾಗಿ ಮನೆಗೆ ತೆರಳಿದವರಿಗೆ ಹೂಮಳೆ ಸುರಿಸಿ ಬೀಳ್ಕೊಟ್ಟ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಅವಳಿ ತಾಲ್ಲೂಕಿನಲ್ಲಿ ಕೊರೊನಾ ಎರಡನೇ ಅಲೆ ಇಳಿಮುಖವಾಗಿದೆ. ಮೂರನೇ ಅಲೆ ಕುರಿತು ತಜ್ಞರು ಎಚ್ಚರಿಕೆ ನೀಡಿರುವುದರಿಂದ ಮುಂಜಾಗ್ರತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ADVERTISEMENT

ಕೊರೊನಾದಿಂದ ಗುಣಮುಖರಾದ 32 ಜನರಿಗೆ ಹೂಮಳೆ ಸುರಿಸುವ ಮೂಲಕ ಬೀಳ್ಕೊಟ್ಟರು. ಗುಣಮುಖರಾದ ಎಲ್ಲರೂ ತಮ್ಮ ಗ್ರಾಮಗಳಿಗೆ ತೆರಳಿದ ನಂತರ ಕೊರೊನಾ ವಾರಿಯರ್‌ಗಳಾಗಿ ಕೆಲಸ ಮಾಡುವಂತೆ ಮನವಿ ಮಾಡಿದರು.

ಊಟದ ವ್ಯವಸ್ಥೆ: ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್‌ನಲ್ಲಿರುವ ಕೊರೊನಾ ಸೋಂಕಿತರು ಹಾಗೂ ಲಸಿಕೆ ಹಾಕಿಸಿಕೊಳ್ಳಲು ಬಂದವರಿಗೆ ಬೆಳಗಿನ ಉಪಾಹಾರ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.