
ದಾವಣಗೆರೆ: ಇಂಗ್ಲಿಷ್ ಮೇಲಿನ ವ್ಯಾಮೋಹದಿಂದ ಕನ್ನಡ ಭಾಷೆಗೆ ಧಕ್ಕೆ ಆಗುತ್ತಿದೆ. ಆಂಗ್ಲ ಭಾಷೆಯ ಮೇಲಿನ ಈ ವ್ಯಾಮೋಹ ಕಡಿಮೆಯಾಗಬೇಕಿದೆ ಎಂದು ಬಿಜೆಪಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಸಲಹೆ ನೀಡಿದರು.
ಇಲ್ಲಿನ ಪಿ.ಬಿ. ರಸ್ತೆಯ ರಮೇಶ್ ಕಾಫಿ ಬಾರ್ ಬಳಿ ವಾಯು ವಿಹಾರ ಬಳಗದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.
‘ಮಾತೃಭಾಷೆಯಾಗಿರುವ ಕನ್ನಡಕ್ಕೆ ಆದ್ಯತೆ ಸಿಗಬೇಕು. ಭಾಷೆಯ ಉಳಿವು ಹಾಗೂ ಬೆಳವಣಿಗೆಗೆ ಪ್ರತಿಯೊಬ್ಬರೂ ಗಮನ ಹರಿಸಬೇಕು. ಕರ್ನಾಟಕ ರಾಜ್ಯೋತ್ಸವ ನವೆಂಬರ್‌ಗೆ ಸೀಮಿತವಾಗದೇ ಇಡೀ ವರ್ಷ ಆಚರಿಸಬೇಕು’ ಎಂದು ಹೇಳಿದರು.
ನಿವೃತ್ತ ಪ್ರಾಂಶುಪಾಲ ಉಮೇಶ್, ಪಾಪಟ್ ಲಾಲ್ ಜೈನ್ ಅವರನ್ನು ಸನ್ಮಾನಿಸಲಾಯಿತು. ಬಳಗದ ಮುಖಂಡರಾದ ಪುಟ್ಟಪ್ಪ, ಅಡಿವಪ್ಪ, ಮಹೇಶ್ವರಪ್ಪ, ಅರುಣ್ ಕುಮಾರ್, ಬಸವರಾಜ್, ಮಹಾನಗರ ಪಾಲಿಕೆ ಮಾಜಿ ಸದಸ್ಯ ಟಿ.ಬಸಪ್ಪ, ಶೇಖರಪ್ಪ, ಶಿವಣ್ಣ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.