ADVERTISEMENT

ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸಿ: ಎಂ.ಪಿ.ರೇಣುಕಾಚಾರ್ಯ ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 4:59 IST
Last Updated 25 ಸೆಪ್ಟೆಂಬರ್ 2025, 4:59 IST
ಹೊನ್ನಾಳಿ ತಾಲ್ಲೂಕಿನ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಲು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು
ಹೊನ್ನಾಳಿ ತಾಲ್ಲೂಕಿನ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಲು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು   

ಹೊನ್ನಾಳಿ: ‘ಅವಳಿ ತಾಲ್ಲೂಕಿನ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು, ಅಥವಾ ರಸ್ತೆಗಳನ್ನು ದುರಸ್ತಿಪಡಿಸಲು ಶಾಸಕರು ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ. ಎಷ್ಟು ಕೆಲಸ ಆಗಿದೆ ಎಂಬ ಬಗ್ಗೆ ಉತ್ತರ ನೀಡಬೇಕು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.

ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಹೊನ್ನಾಳಿಯಲ್ಲಿ ಹಮ್ಮಿಕೊಂಡಿದ್ದ ಸಾಂಕೇತಿಕ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ರಸ್ತೆ ದುರಸ್ತಿಯಾಗುವವರೆಗೆ ನಿರಂತರ ಪ್ರತಿಭನೆ ಹಮ್ಮಿಕೊಳ್ಳಲಾಗುವುದು. ಎರಡೂವರೆ ವರ್ಷಗಳಲ್ಲಿ ನಮ್ಮ ಭಾಗದ ರಾಜ್ಯ ಹೆದ್ದಾರಿಗೆ, ಜಿಲ್ಲಾ ರಸ್ತೆ ಹಾಗೂ ತಾಲ್ಲೂಕಿನ ರಸ್ತೆ ಮತ್ತು ಒಳರಸ್ತೆಗಳ ಅಭಿವೃದ್ಧಿಗೆ ಶಾಸಕರು ಎಷ್ಟು ಅನುದಾನ ತಂದಿದ್ದಾರೆ’ ಎಂದು ಪ್ರಶ್ನಿಸಿದರು.

ADVERTISEMENT

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಮಾಜಿ ಅಧ್ಯಕ್ಷ ಜೆ.ಕೆ. ಸುರೇಶ್, ಮುಖಂಡ ಮಾರುತಿನಾಯ್ಕ, ಎಸ್.ಎಸ್. ಬೀರಪ್ಪ, ಮಾದೇನಹಳ್ಳಿ ನಾಗರಾಜ್, ನೆಲಹೊನ್ನೆ ಮಂಜುನಾಥ್, ಕುಂದೂರು ಅನಿಲ್, ಹನುಮಂತಪ್ಪ, ಪುರಸಭೆ ಸದಸ್ಯ ರಂಗನಾಥ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.