ADVERTISEMENT

ಸಂವಿಧಾನ ಅಣಕಿಸುತ್ತಿರುವ ಸ್ವೇಚ್ಛಾಚಾರ: ಕಳವಳ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 15:38 IST
Last Updated 26 ಜನವರಿ 2022, 15:38 IST
ದಾವಣಗೆರೆ ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಕುವೆಂಪು ಕನ್ನಡ ಭವನದಲ್ಲಿ ಬುಧವಾರ ಗಣರಾಜ್ಯೋತ್ಸವ ಆಚರಿಸಲಾಯಿತು.
ದಾವಣಗೆರೆ ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಕುವೆಂಪು ಕನ್ನಡ ಭವನದಲ್ಲಿ ಬುಧವಾರ ಗಣರಾಜ್ಯೋತ್ಸವ ಆಚರಿಸಲಾಯಿತು.   

ದಾವಣಗೆರೆ: ‘ಇತ್ತೀಚಿನ ದಿನಗಳಲ್ಲಿ ಸಂವಿಧಾನ, ಪ್ರಜಾಪ್ರಭುತ್ವದ ಹೆಸರಿನಲ್ಲಿ ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಅನಾಚಾರ, ಸ್ವೇಚ್ಛಾಚಾರ ಮಿತಿ ಮೀರುತ್ತಿದೆ. ಇದು ಪ್ರಜಾಪ್ರಭುತ್ವ, ಸಂವಿಧಾನದ ಆಶಯವನ್ನು ಅಣಕಿಸುವಂತಾಗಿರುವುದು ದುರಂತ’ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಡಾ.ಎಚ್‌.ಎಸ್.ಮಂಜುನಾಥ್ ಕುರ್ಕಿ ಕಳವಳ ವ್ಯಕ್ತಪಡಿಸಿದರು.

ದಾವಣಗೆರೆ ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಕುವೆಂಪು ಕನ್ನಡ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ 73ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸಂವಿಧಾನದ ಆಶಯಗಳು ಕೇವಲ ಪುಸ್ತಕಗಳಲ್ಲಿ, ಉಪನ್ಯಾಸದಲ್ಲಿ ಮಾತ್ರ ವಿಜೃಂಭಿಸಬಾರದು. ನಿಜ ಜೀವನದಲ್ಲೂ ಅಳವಡಿಸಿಕೊಂಡಾಗ ಮಾತ್ರ ನಾವು ಸಂವಿಧಾನಕ್ಕೆ ಸಲ್ಲಿಸುವ ಶ್ರೇಷ್ಠ ಗೌರವವಾಗಲಿದೆ ಎಂದು ಅಭಿಪ್ರಾಯಪಟ್ಟರು.

ADVERTISEMENT

‘ಭಾರತವು ಗಣರಾಜ್ಯದ ಮೌಲ್ಯಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಅಳವಡಿಸಿಕೊಂಡಿರುವ ದೇಶವಾಗಿದೆ‌. ದೇಶದ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾಗಿದೆ. ಇಂದು ನಾವು ಅನುಭವಿಸುತ್ತಿರುವ ಮೂಲಭೂತ ಹಕ್ಕುಗಳು ಸಂವಿಧಾನ ನೀಡಿರುವ ಕೊಡುಗೆಯಾಗಿದೆ. ಸರ್ವ ಶ್ರೇಷ್ಠ ಸಂವಿಧಾನವನ್ನು ಹೊಂದಲು ಕಾರಣೀಕರ್ತರಾದ ಡಾ.ಬಿ.ಆರ್.ಅಂಬೇಡ್ಕರ್ ಆದಿಯಾಗಿ ಎಲ್ಲ ಮಹನೀಯರನ್ನು ನಾವು ಸ್ಮರಿಸಬೇಕು. ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಪಾಲಿಸಬೇಕು’ ಎಂದು ಹೇಳಿದರು.

ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎ.ಆರ್.ಉಜ್ಜನಪ್ಪ, ಗೌರವ ಕಾರ್ಯದರ್ಶಿ ಬಿ.ದಿಳ್ಯೆಪ್ಪ, ಜಿಲ್ಲಾ ಕಸಾಪ ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ, ಸಂತೇಬೆನ್ನೂರು ಸಿರಾಜ್ ಅಹಮದ್, ಫಾಲಾಕ್ಷಪ್ಪ ಗೋಪನಾಳ್, ಬೇತೂರು ಷಡಾಕ್ಷರಪ್ಪ, ಜಿ.ಆರ್.ಷಣ್ಮುಖಪ್ಪ, ಕಸಾಪ ದಾವಣಗೆರೆ ತಾಲ್ಲೂಕು ಅಧ್ಯಕ್ಷೆ ಸುಮತಿ ಜಯಪ್ಪ, ಪರಮೇಶ್ವರಪ್ಪ ದಾಗಿನಕಟ್ಟೆ, ಸತ್ಯಭಾಮಾ ಮಂಜುನಾಥ್, ವೀಣಾ ಕೃಷ್ಣಮೂರ್ತಿ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.