ADVERTISEMENT

ಮಲೇಬೆನ್ನೂರು | ಸಂಭ್ರಮದ 76ನೇ ಗಣರಾಜ್ಯೋತ್ಸವ ಆಚರಣೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2026, 5:30 IST
Last Updated 27 ಜನವರಿ 2026, 5:30 IST
ಮಲೇಬೆನ್ನೂರು ಪಟ್ಟಣದ ಮುಖ್ಯವೃತ್ತದಲ್ಲಿ ಸೋಮವಾರ ಗಣರಾಜ್ಯೋತ್ಸವದ ಅಂಗವಾಗಿ ದ್ವಜಾರೋಹಣ ನೆರವೇರಿಸಲಾಯಿತಿ
ಮಲೇಬೆನ್ನೂರು ಪಟ್ಟಣದ ಮುಖ್ಯವೃತ್ತದಲ್ಲಿ ಸೋಮವಾರ ಗಣರಾಜ್ಯೋತ್ಸವದ ಅಂಗವಾಗಿ ದ್ವಜಾರೋಹಣ ನೆರವೇರಿಸಲಾಯಿತಿ   

ಮಲೇಬೆನ್ನೂರು: ಹೋಬಳಿ ವ್ಯಾಪ್ತಿಯ ವಿವಿಧ ಶಾಲೆ, ಕಾಲೇಜು, ಸರ್ಕಾರಿ ಕಚೇರಿ, ಗ್ರಾಮ ಪಂಚಾಯಿತಿಗಳಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತಿ

ಪುರಸಭೆ: ಕಚೇರಿ ಆವರಣದಲ್ಲಿ ಪುರಸಭೆ ಪ್ರಭಾರಿ ಅಧ್ಯಕ್ಷೆ ಸುಮಯ್ಯಾಬಾನು ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸಲ್ಲಿಸಿದರು.

ಪುರಸಭಾ ಮುಖ್ಯಾಧಿಕಾರಿ ನಿರಂಜನಿ, ಪರಿಸರ ಎಂಜಿನಿಯರ್ ಉಮೇಶ್, ಕಚೇರಿ ಅಧೀಕ್ಷಕಿ ಜಯಲಕ್ಷ್ಮೀ, ಆರೋಗ್ಯ ನಿರೀಕ್ಷಕರಾದ ಶಿವರಾಜ್‌, ಸದಸ್ಯರು, ಮಾಜಿ ಸದಸ್ಯರು, ನಾಗರಿಕರು, ಕಚೇರಿ ಸಿಬ್ಬಂದಿ ಇದ್ದರು.

ADVERTISEMENT

ನಾಡಕಚೇರಿ: ಉಪತಹಶೀಲ್ದಾರ್ ಆರ್. ರವಿ ರಾಷ್ಟ್ರಪಿತ ಮಹಾತ್ಮಾಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು.

ರಾಜಸ್ವ ನಿರೀಕ್ಷಕ ಆನಂದ್‌ , ವಿಎ ಅಣ್ಣಪ್ಪ, ವಿವಿಧ ಗ್ರಾಮಗಳ ಕಂದಾಯ ಕಾರ್ಯದರ್ಶಿಗಳು, ಸಿಬ್ಬಂದಿ ಇದ್ದರು.

ಮಲೇಬೆನ್ನೂರಿನ ನೂತನ ನಾಡಕಚೇರಿಯಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವದ ಅಂಗವಾಗಿ ಉಪತಹಶೀಲ್ದಾರ್ ಆರ್. ರವಿ ಧ್ವಜಾರೋಹಣ ನೆರವೇರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.