ADVERTISEMENT

ಅತಿಥಿ ಉಪನ್ಯಾಸಕರನ್ನು ಮುಂದುವರಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 22 ಜನವರಿ 2021, 1:56 IST
Last Updated 22 ಜನವರಿ 2021, 1:56 IST
ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನೇ 2020-21ನೇ ಶೈಕ್ಷಣಿಕ ಸಾಲಿಗೆ  ಮುಂದುವರಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಮನವಿ ಸಲ್ಲಿಸಿತು.
ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನೇ 2020-21ನೇ ಶೈಕ್ಷಣಿಕ ಸಾಲಿಗೆ  ಮುಂದುವರಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಮನವಿ ಸಲ್ಲಿಸಿತು.   

ದಾವಣಗೆರೆ: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನೇ 2020-21ನೇ ಶೈಕ್ಷಣಿಕ ಸಾಲಿಗೆ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂದು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಕೊಟ್ರೇಶ್ ಎಚ್. ಒತ್ತಾಯಿಸಿದರು.

ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,183 ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇದರಲ್ಲಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಶೇ 50ರಷ್ಟು (7091) ಅತಿಥಿ ಉಪನ್ಯಾಸಕರನ್ನ ತುರ್ತಾಗಿ ಆಯ್ಕೆ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಮ್ಮತಿ ನೀಡಿದ್ದಾರೆ. ಇದರಿಂದ ಹಲವಾರು ವರ್ಷಗಳಿಂದ ಕನಿಷ್ಠ ಗೌರವ ಧನದಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.

ಶೇ 50 ರಷ್ಟು ಅತಿಥಿ ಉಪನ್ಯಾಸಕರು ಸೇವೆಯಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ಜತೆಗೆ ವಿದ್ಯಾರ್ಥಿಗಳ ಭವಿಷ್ಯ ಕೂಡ ಅತಂತ್ರ ಸ್ಥಿತಿಯಾಗಿದೆ. ಕಾಲೇಜು ಶಿಕ್ಷಣ ಇಲಾಖೆಯು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಈ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನೇ ಮುಂದುವರಿಸಲು, ಈಗಿನ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ರಾಜ್ಯ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳಾದ ಡಾ.ಎಂ. ಪ್ರಭಾಕರ, ಮಂಜುಳಾ ಪಿ., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಮ್ಮ ಪಿ.ವಿ., ಸದಸ್ಯರಾದ ಡಿ.ಪಿ ಗಂಗಾಧರ, ಗೋವಿಂದ ರೆಡ್ಡಿ, ಉಷಾ ಕೆ.ಆರ್., ಆಶಾ, ಧನಂಜಯಮೂರ್ತಿ, ವಿನಯ್, ಎಂ.ಬಿ. ರವಿಕುಮಾರ್, ಗಜೇಂದ್ರ, ನಿಂಗಪ್ಪ, ಹುಲಿಕುಂಟೇಶ್ವರ, ಡಾ. ದೇವೇಂದ್ರಪ್ಪ, ಅಸೀನಾ ಬೇಗಂ. ತೂಪಣ್ಣ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.