ADVERTISEMENT

ದಾವಣಗೆರೆ | ಮೀಸಲಾತಿ: ಪೂರಕ ಕ್ರಮಕ್ಕೆ ಸ್ವಾಮೀಜಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2023, 7:36 IST
Last Updated 26 ಮಾರ್ಚ್ 2023, 7:36 IST
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಶನಿವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿಯನ್ನು ಪೀಠಾಧಿಪತಿ ವಚನಾನಂದ ಸ್ವಾಮೀಜಿ ಸನ್ಮಾನಿಸಿದರು.
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಶನಿವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿಯನ್ನು ಪೀಠಾಧಿಪತಿ ವಚನಾನಂದ ಸ್ವಾಮೀಜಿ ಸನ್ಮಾನಿಸಿದರು.   

ದಾವಣಗೆರೆ: ‘ಪಂಚಮಸಾಲಿ ಸಮುದಾಯದ ಬೇಡಿಕೆ ಪರಿಗಣಿಸಿ ಮೀಸಲಾತಿಯನ್ನು ಶೇ 7ಕ್ಕೆ ಹೆಚ್ಚಿಸಿರುವುದು ಸ್ವಾಗತಾರ್ಹ. ಮೀಸಲಾತಿ ಶೀಘ್ರ ಸಮುದಾಯದ ಎಲ್ಲರಿಗೂ ಶೀಘ್ರ ತಲುಪಿಸಲು ಪೂರಕ ಕ್ರಮ ಕೈಗೊಳ್ಳಬೇಕು’ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಒತ್ತಾಯಿಸಿದರು.

ಹರಿಹರದ ಪಂಚಮಸಾಲಿ ಪೀಠಕ್ಕೆ ಶನಿವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿಯನ್ನು ಸನ್ಮಾನಿಸಿ ಅವರು ಮಾತನಾಡಿದರು.

‘ಮೂರು ದಶಕಗಳಿಂದ ಹರಿಹರ ಪಂಚಮಸಾಲಿ ಪೀಠದ ನೇತೃತ್ವದಲ್ಲಿ ನಡೆಸಿದ ಹೋರಾಟಕ್ಕೆ ಯಶಸ್ಸು ದೊರಕಿಸಿ ಕೊಟ್ಟಿದ್ದೀರಿ. ನಮ್ಮ ಸಮುದಾಯದ ಬೇಡಿಕೆ ಹೆಚ್ಚಿತ್ತು. ಅದಕ್ಕೆ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ತಿಳಿಸಿದ್ದೇವೆ. ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಪಂಚಮಸಾಲಿಗಳಿಗೆ ಸ್ಥಾನ ದೊರಕಿಸಿಕೊಡುವಂತೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿಗೂ ವಿನಂತಿಸಿದ್ದೇವೆ’ ಎಂದು ಸ್ವಾಮೀಜಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.