
ಪ್ರಜಾವಾಣಿ ವಾರ್ತೆ
ಸಾವು–ಸಾಂದರ್ಭಿಕ ಚಿತ್ರ
ನ್ಯಾಮತಿ: ತಾಲ್ಲೂಕಿನ ಶಿವಮೊಗ್ಗ-ಶಿಕಾರಿಪುರ ರಸ್ತೆಯ ಹೊಸಜೋಗ ಗ್ರಾಮದ ಬಳಿ ಭಾನುವಾರ ಅಶೋಕ ಮಿನಿ ಲಾರಿ ಪಲ್ಟಿಯಾಗಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಅಮ್ಮಿಯಾ (37) ಅವರಿಗೆ ತೀವ್ರ ಪೆಟ್ಟು ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಶಿವಮೊಗ್ಗದಿಂದ ಶಿಕಾರಿಪುರ ತಾಲ್ಲೂಕಿನ ಕೊಡಮಗಿ ಗ್ರಾಮಕ್ಕೆ 18 ಜನರು ಪ್ರಯಾಣಿಸುತ್ತಿದ್ದರು. ಅತಿವೇಗದ ಚಾಲನೆಯಿಂದಾಗಿ ವಾಹನ ಪಲ್ಟಿಯಾಗಿದೆ. ವಾಹನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಇದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಫಾತಿಮಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಉಳಿದವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ಇನ್‌ಸ್ಪೆಕ್ಟರ್ ಎನ್.ಎಸ್.ರವಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.