
ಆಸ್ಪತ್ರೆ
–(ಪ್ರಾತಿನಿಧಿಕ ಚಿತ್ರ)
ದಾವಣಗೆರೆ: ನಗರದ ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಅತ್ಯಾಧುನಿಕ ವೈದ್ಯಕೀಯ ಸೇವೆಗಳನ್ನು ಒದಗಿಸುವ ತನ್ನ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸುತ್ತಾ, ರೋಬೋಟಿಕ್ ಮಂಡಿಕೀಲು ಬದಲಾವಣೆ ಶಸ್ತ್ರಚಿಕಿತ್ಸೆಯನ್ನು ಜನವರಿ 22ರಿಂದ ಪ್ರಾರಂಭಿಸುತ್ತಿದೆ.
ಈ ಅತ್ಯಾಧುನಿಕ ರೋಬೋಟಿಕ್ ತಂತ್ರಜ್ಞಾನವು ಮಂಡಿ ಕೀಲು ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ನಿಖರತೆಯನ್ನು ಸಾಧಿಸಲಿದೆ. ಕಡಿಮೆ ನೋವು, ವೇಗವಾದ ಚೇತರಿಕೆ ಮತ್ತು ದೀರ್ಘಕಾಲಿಕ ಇಂಪ್ಲಾಂಟ್ ಫಲಿತಾಂಶ ನೀಡಲಿದೆ. ದೀರ್ಘಕಾಲದ ಮಂಡಿ ಕೀಲು ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಇದು ಅತ್ಯಂತ ಉಪಯುಕ್ತವಾಗಿದೆ.
ರೋಬೋಟಿಕ್ ಮಂಡಿ ಕೀಲು ಶಸ್ತ್ರಚಿಕಿತ್ಸೆಯನ್ನು ಆಸ್ಪತ್ರೆಯ ಮುಖ್ಯಸ್ಥ ಡಾ. ರವಿಕುಮಾರ್ ಟಿ.ಜಿ. ಮಾರ್ಗದರ್ಶನದಲ್ಲಿ ಮಂಡಿಕೀಲು ಬದಲಾವಣೆ ಶಸ್ತ್ರಚಿಕಿತ್ಸಕರಾದ ಲಿಂಗರಾಜು ಎ.ಪಿ. ಮತ್ತು ಡಾ. ಧ್ರುವ ವಿ. ಹಾಗೂ ಅರಿವಳಿಕೆ ತಜ್ಞ ಡಾ. ದೀಪಕ್ ಆರ್.ಎಂ. ನೇತೃತ್ವದಲ್ಲಿ ಆರಂಭಿಸಲಾಗುತ್ತಿದೆ.
‘ಮಧ್ಯ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ದಾವಣಗೆರೆಯಲ್ಲಿ ರೋಬೋಟಿಕ್ ಮಂಡಿಕೀಲು ಬದಲಾವಣೆ ಶಸ್ತ್ರಚಿಕಿತ್ಸೆಯನ್ನು ಪ್ರಾರಂಭಿಸುತ್ತಿದ್ದೇವೆ. ಈ ಮೂಲಕ ಪ್ರಾದೇಶಿಕ ರೋಗಿಗಳಿಗೆ ಅತ್ಯಾಧುನಿಕ ಅಸ್ಥಿ ಚಿಕಿತ್ಸೆಯನ್ನು ಸುಲಭವಾಗಿ ಲಭ್ಯವಾಗಿಸುವುದು ನಮ್ಮ ಉದ್ದೇಶವಾಗಿದೆ’ ಎಂದು ಡಾ. ರವಿಕುಮಾರ್ ಟಿ.ಜಿ. ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಮೊ. 8431541487 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.