ADVERTISEMENT

ಮೀಸಲಾತಿ ಹೆಚ್ಚಳಕ್ಕೆ ಆಗ್ರಹ | ರಾಜನಹಳ್ಳಿಯಿಂದ ರಾಜಧಾನಿಗೆ ಪಾದಯಾತ್ರೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2019, 7:16 IST
Last Updated 9 ಜೂನ್ 2019, 7:16 IST
   

ದಾವಣಗೆರೆ: ಶೇ 3ರಿಂದ ಶೇ 7.5ರಷ್ಟು ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ರಾಜನಹಳ್ಳಿಯಿಂದ ರಾಜಧಾನಿಗೆಪಾದಯಾತ್ರೆಗೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಿಂದ ಭಾನುವಾರ ಚಾಲನೆ ನೀಡಲಾಯಿತು. ವಾಲ್ಮೀಕಿಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಚಾಲನೆ ನೀಡಿದರು.

ಪುಣ್ಯಾನಂದಪುರಿ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು.

ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ಬಿ.ಶ್ರೀರಾಮುಲು, ಟಿ.ರಘುಮೂರ್ತಿ, ಬಳ್ಳಾರಿ ಸಂಸದ ದೇವೇಂದ್ರಪ್ಪಹಾಗೂ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.