ADVERTISEMENT

ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಕ್ರಮ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ನೆಲ್ಲಿಹಂಕಲು-ಚಿಕ್ಕಮಳಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 14:47 IST
Last Updated 14 ನವೆಂಬರ್ 2020, 14:47 IST
ಚನ್ನಗಿರಿ ತಾಲ್ಲೂಕು ನೆಲ್ಲಿಹಂಕಲು ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭೂಮಿಪೂಜೆ ನೆರವೇರಿಸಿದರು. ಕವಿತಾ ಕಲ್ಲೇಶ್, ಚಂದ್ರಮ್ಮ ಇದ್ದರು.
ಚನ್ನಗಿರಿ ತಾಲ್ಲೂಕು ನೆಲ್ಲಿಹಂಕಲು ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭೂಮಿಪೂಜೆ ನೆರವೇರಿಸಿದರು. ಕವಿತಾ ಕಲ್ಲೇಶ್, ಚಂದ್ರಮ್ಮ ಇದ್ದರು.   

ಚನ್ನಗಿರಿ: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಉತ್ತಮ ಸಂಪರ್ಕ ರಸ್ತೆಗಳನ್ನು ನಿರ್ಮಿಸಲು ಬದ್ಧ. ನೆಲ್ಲಿಹಂಕಲು-ಚಿಕ್ಕಮಳಲಿ ಗ್ರಾಮದ ರಸ್ತೆ ಅಭಿವೃದ್ಧಿಗೆ ₹ 1 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.

ತಾಲ್ಲೂಕಿನ ನೆಲ್ಲಿಹಂಕಲು ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್ ‘ಇ’ ಯೋಜನೆ ಅಡಿ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಯಾವುದೇ ಕಾರಣಕ್ಕೂ ಕಳಪೆ ಕಾಮಗಾರಿಯಾದರೆ ಸಹಿಸುವುದಿಲ್ಲ. ಗುಣಮಟ್ಟದ ಕಾಮಗಾರಿಯನ್ನು ಗುತ್ತಿಗೆದಾರರು ಮಾಡಬೇಕು. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕಾಮಗಾರಿಯ ಬಗ್ಗೆ ನಿಗಾ ವಹಿಸಬೇಕು. ಕ್ಷೇತ್ರದಲ್ಲಿ ಈಗಾಗಲೇ ಹಲವಾರು ಕಡೆಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಎಂದರು.

ADVERTISEMENT

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾ ಕಲ್ಲೇಶ್, ಉಪಾಧ್ಯಕ್ಷೆ ಚಂದ್ರಮ್ಮ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಪ್ರಕಾಶ್, ಪ್ರಥಮ ದರ್ಜೆ ಗುತ್ತಿಗೆದಾರ ಮಹೇಶ್ ಕಾಕನೂರು, ಜಯಾಭೋವಿ, ತಮ್ಮಣ್ಣ, ರಾಜೇಶ್ ನೆಲ್ಲಿಹಂಕಲು, ಸಿದ್ಧರಾಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.