ADVERTISEMENT

ದಾವಣಗೆರೆ ಮೇಯರ್ ಆಗಿ ಎಸ್.ಟಿ. ವೀರೇಶ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 7:03 IST
Last Updated 24 ಫೆಬ್ರುವರಿ 2021, 7:03 IST
ಎಸ್.ಟಿ. ವೀರೇಶ್
ಎಸ್.ಟಿ. ವೀರೇಶ್   

ದಾವಣಗೆರೆ: ಮಹಾನಗರ ಪಾಲಿಕೆಯ ಮೇಯರ್ ಆಗಿ ಎಸ್.ಟಿ. ವೀರೇಶ್, ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್ ಬುಧವಾರ ಆಯ್ಕೆಯಾಗಿದ್ದಾರೆ.

ಸಾಮಾನ್ಯಕ್ಕೆ ಮೀಸಲಾದ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ 25ನೇ ವಾರ್ಡಿನ ಎಸ್.ಟಿ. ವೀರೇಶ್, ಕಾಂಗ್ರೆಸ್‌ನಿಂದ 38ನೇ ವಾರ್ಡಿನ ಗಡಿಗುಡಾಳ ಮಂಜುನಾಥ ನಾಮಪತ್ರ ಸಲ್ಲಿಸಿದ್ದರು.

ಎಸ್ಸಿ ಮಹಿಳಾ ಮೀಸಲಾದ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ 44ನೇ ವಾರ್ಡಿನ ಶಿಲ್ಪಾ ಜಯಪ್ರಕಾಶ್, ಕಾಂಗ್ರೆಸ್‌ನಿಂದ 36ನೇ ವಾರ್ಡಿನ ನಾಗರತ್ನಮ್ಮ ನಾಮಪತ್ರ ಸಲ್ಲಿಸಿದ್ದರು.

ADVERTISEMENT

ಬಿಜೆಪಿ ಅಭ್ಯರ್ಥಿಗಳಿಗೆ 29 ಹಾಗೂ ಕಾಂಗ್ರೆಸ್‍ ಅಭ್ಯರ್ಥಿಗಳಿಗೆ 22 ಮತಗಳು ಬಿದ್ದವು. ಏಳು ಮತದಾರರು ಚುನಾವಣೆಗೆ ಗೈರು ಹಾಜರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.