ADVERTISEMENT

ಗಾಂಜಾ ಮಾರಾಟ: ಆರೋಪಿಗೆ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2019, 13:26 IST
Last Updated 3 ಆಗಸ್ಟ್ 2019, 13:26 IST

ದಾವಣಗೆರೆ: ತನ್ನ ಅಡಿಕೆ ತೋಟದಲ್ಲಿ ಗಾಂಜಾ ಬೆಳೆದು ಮಾರಾಟ ಮಾಡಿ ಸಿಕ್ಕಿಬಿದ್ದಿದ್ದ ಆರೋಪಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ, ₹ 25 ಸಾವಿರ ದಂಡ ವಿಧಿಸಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಸಯದರ ಕಲ್ಲಳ್ಳಿ ಗ್ರಾಮದ ರಾಜಪ್ಪ ಆರೋಪಿ. 2015ರ ಡಿಸೆಂಬರ್‌ನಲ್ಲಿ ಹೊನ್ನಾಳಿ ತಾಲ್ಲೂಕು ಸಾಸ್ವೆಹಳ್ಳಿ ಗ್ರಾಮದ ಇಂಡಿಯನ್‌ ಪೆಟ್ರೋಲ್‌ ಬಂಕ್‌ ಬಳಿಕ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದ. ಆವಾಗ 800 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿತ್ತು. ಬಳಿಕ ವಿಚಾರಣೆ ನಡೆಸಿದಾಗ ಆರೋಪಿ ತನ್ನ ಅಡಿಕೆ ತೋಟದಲ್ಲಿಯೇ ಗಾಂಜಾ ಬೆಳೆದಿರುವ ಬಗ್ಗೆ ಬಾಯಿ ಬಿಟ್ಟಿದ್ದ. ಆತನ ತೋಟದ ಮನೆಯಲ್ಲಿ 51 ಕೆ.ಜಿ. ಗಾಂಜಾ ಪತ್ತೆಯಾಗಿತ್ತು. ಆಗಿನ ಎಸ್‌ಐ ಅಶ್ವಿನ್‌ ಕುಮಾರ್‌ ವಶಪಡಿಸಿಕೊಂಡಿದ್ದರು. ಆಗಿನ್‌ ಸರ್ಕಲ್‌ ಇನ್‌ಸ್ಪೆಕ್ಟರ್‌ ಜೆ.ರಮೇಶ್‌ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಅಂಬಾದಾಸ್‌ ಜಿ. ಕುಲಕರ್ಣಿ ಶನಿವಾರ ಶಿಕ್ಷೆ ಪ್ರಕಟಿಸಿದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜ ಎಸ್‌.ವಿ. ಪಾಟೀಲ್‌ ವಾದ ಮಂಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.