ADVERTISEMENT

ಸಂತೇಬೆನ್ನೂರು | ‘ಪರಿಣಾಮಕಾರಿ ಬದಲಾವಣೆ ಉದ್ದೇಶ’

​ಪ್ರಜಾವಾಣಿ ವಾರ್ತೆ
Published 13 ಮೇ 2025, 14:22 IST
Last Updated 13 ಮೇ 2025, 14:22 IST
ಸಂತೇಬೆನ್ನೂರಿನ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಅರಿವು ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು
ಸಂತೇಬೆನ್ನೂರಿನ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಅರಿವು ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು   

ಸಂತೇಬೆನ್ನೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಬದಲಾವಣೆ ತರುವ ಉದ್ದೇಶದಿಂದ ಸರ್ಕಾರದ ವಿವಿಧ ಯೋಜನೆಗಳಡಿ ನೀಡುವ ಅನುದಾನವು ಜನರ ಬದುಕಿನಲ್ಲಿ ಪರಿಣಾಮಕಾರಿ ಬದಲಾವಣೆ ತರಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಮ್ಮ ಮೂರ್ತ್ಯಪ್ಪ ಹೇಳಿದರು.

ಇಲ್ಲಿನ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಅರಿವು ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಲ್ಲಿನ ಅರಿವು ಕೇಂದ್ರದ ಮೇಲ್ವಿಚಾರಕ ಟಿ.ಎನ್.ರೇವಣ್ಣ ಬೇಸಿಗೆ ಶಿಬಿರದ ಮಕ್ಕಳಿಗೆ 72 ವಿವಿಧ ಬಗೆಯ ಚಟುವಟಿಕೆಗಳನ್ನು ನಿರ್ವಹಿಸಿ ಮಕ್ಕಳಲ್ಲಿ ನಿರೀಕ್ಷಿತ ಬದಲಾವಣೆ ತಂದಿದ್ದಾರೆ. ಸೃಜನಾತ್ಮಕ ಕಲಿಕೆ, ಸಾಮಾಜಿಕ ಸಂಸ್ಥೆಗಳ ಪರಿಚಯ, ಗಣಿತದ ಮೂಲ ಕ್ರಿಯೆಗಳ ಕಲಿಕೆ, ವಿವಿಧ ಕ್ರೀಡೆಗಳ ತರಬೇತಿ, ದೇಸಿ ಕ್ರೀಡೆಗಳ ಪರಿಚಯ ಮಾಡಿಸಿದ್ದಾರೆ ಎಂದರು.

ADVERTISEMENT

ಬೇಸಿಗೆ ಶಿಬಿರ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಪೂರಕ ವೇದಿಕೆ ಕಲ್ಪಿಸಿದ ಎಂದು ಸಾಹಿತಿ ಸುನಿತಾ ರಾಜು ಹೇಳಿದರು.

ಗ್ರಾ.ಪಂ.ಉಪಾಧ್ಯಕ್ಷೆ ಮೀನಾಕ್ಷಿ ಕರಿಯಪ್ಪ, ಸದಸ್ಯ ರಹಮತ್ ಉಲ್ಲಾ, ಗ್ರಾ.ಪಂ.ಮಾಜಿ ಅಧ್ಯಕ್ಷ ಸುರೇಶ್ ಗೌಡ, ದಿಶಾ ಸಮಿತಿ ಸದಸ್ಯ ಕೃಷ್ಣಮೂರ್ತಿ, ಸಿಡಿಸಿ ಉಪಾಧ್ಯಕ್ಷ ಸ್ವಾಮಿ ಗೌಡ, ಎಸ್‌ಡಿಎಂಸಿ ಅಧ್ಯಕ್ಷ ನಯಾಜ್, ಮೇಲ್ವಿಚಾರಕ ಟಿ.ಎನ್.ರೇವಣ್ಣ, ಮೋಹನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.