ತ್ಯಾವಣಿಗೆ: ಸಮೀಪದ ಬೆಳಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಮೂಕಪ್ಪರ ಮಂಜಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪೂಜಾರಿ ಶಿವಕುಮಾರ್ ನಾಯಕ್ ತಿಳಿಸಿದರು.
ಕಾವ್ಯಾ ರಘುನಾಥ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು. 12 ಸದಸ್ಯರ ಬಲದ ಗ್ರಾಮ ಪಂಚಾಯಿತಿಯಲ್ಲಿ ಮೂಕಪ್ಪರ ಮಂಜಮ್ಮ ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸಿದ ಕಾರಣ, ಅವರು ಅವಿರೋಧವಾಗಿ ಆಯ್ಕೆಯಾದರು.
ಬೆಳಲಗೆರೆ ಗ್ರಾಮ ಪಂಚಾಯಿತಿ ಪಿಡಿಒ ಮಧುಕುಮಾರ್ ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.