ಸ್ವಾತಂತ್ರ್ಯಾ ನಂತರದ ವರ್ಷಗಳಲ್ಲಿ ಭಾರತವು ಅಭಿವೃದ್ಧಿ ಪಥದಲ್ಲಿ ಸಾಗಿದ್ದು, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸದೃಢವಾಗಿದೆ. ಪ್ರಪಂಚವೇ ತಿರುಗಿ ನೋಡುವಂತಹ ಮಟ್ಟಕ್ಕೆ ದೇಶ ಬೆಳೆಯುತ್ತಿದೆ. ಇದು ನಮಗೆಲ್ಲಾ ಹೆಮ್ಮೆಯ ಸಂಗತಿ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಬ್ಬಾರ್ ಅಲಿಖಾನ್ ಹೇಳಿದರು.
ಇಲ್ಲಿನ ಗ್ರಾಮ ಪಂಚಾಯಿತಿ ಆವರಣದಲ್ಲಿ ಶುಕ್ರವಾರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
‘ದೇಶದ ಸಮಗ್ರತೆಗೆ ನಾವೆಲ್ಲರೂ ಟೊಂಕ ಕಟ್ಟಿ ನಿಲ್ಲಬೇಕು. ದೇಶ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ, ದೇಶಕ್ಕೆ ನಾನು ಏನು ಮಾಡಿದ್ದೇನೆ ಎನ್ನುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಾಂತಾ, ಸದಸ್ಯರು, ಪಿಡಿಒ ಹನುಮಂತ ನಾಯ್ಕ ಎಲ್. ಹಾಗೂ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.