
ಪ್ರಜಾವಾಣಿ ವಾರ್ತೆ
ಸಾಸ್ವೆಹಳ್ಳಿ: ಸಮೀಪದ ಬೆನಕನಹಳ್ಳಿಯ ಪಿಎಂಶ್ರೀ ಶಾಲೆಯಲ್ಲಿ ಶನಿವಾರ ಸಂಕ್ರಾಂತಿ ಹಬ್ಬವನ್ನು ಸಡಗರ–ಸಂಭ್ರಮದಿಂದ ಆಚರಿಸಲಾಯಿತು.
ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳು ರೈತರ ವೇಷಭೂಷಣಗಳನ್ನು ಧರಿಸಿ ಎಲ್ಲರ ಗಮನ ಸೆಳೆದರು. ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ವೇಷಭೂಷಣಗಳು ಆಚರಣೆಗೆ ಮೆರುಗು ನೀಡಿದವು.
ವಿದ್ಯಾರ್ಥಿಗಳಲ್ಲಿ ಹಬ್ಬದ ಮಹತ್ವವನ್ನು ಮೂಡಿಸಲು ಶಿಕ್ಷಕರು ವಿವಿಧ ಕಾರ್ಯಕ್ರಮ ಆಯೋಜಿಸಿದ್ದರು. ನೃತ್ಯದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂಕ್ರಾಂತಿಯ ಸವಿಯನ್ನು ಅನುಭವಿಸಿದರು.
ಎಸ್‌ಡಿಎಂಸಿ ಅಧ್ಯಕ್ಷ ಮಂಜನ ಗೌಡ್ರು ಹಾಗೂ ಸದಸ್ಯರು, ಮುಖ್ಯೋಪಾಧ್ಯಾಯ ಕೋಟ್ಯಪ್ಪ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.