
ಸಾಸ್ವೆಹಳ್ಳಿ: ಕಾರ್ಮಿಕರು ರಾಷ್ಟ್ರದ ಮೂಲಭೂತ ಸೌಕರ್ಯಗಳ ನಿರ್ಮಾಣದ ಬೆನ್ನೆಲುಬಾಗಿದ್ದಾರೆ. ಕಠಿಣ ಪರಿಸರದಲ್ಲಿ ಕೆಲಸ ಮಾಡುವ ಅವರ ಆರೋಗ್ಯ ರಕ್ಷಣೆ ಸರ್ಕಾರದ ಆದ್ಯತೆಯಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಹೇಳಿದರು.
ಸಮೀಪದ ಲಿಂಗಾಪುರ ಗ್ರಾಮದಲ್ಲಿ ನೊಂದಾಯಿತ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕರಿಗಾಗಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
‘ಕಾರ್ಮಿಕರ ಆರೋಗ್ಯವೇ ದೇಶದ ಸಂಪತ್ತು’ ಎಂಬ ಧ್ಯೇಯವಾಕ್ಯದೊಂದಿಗೆ ಶಿಬಿರ ಆಯೋಜಿಸಿದೆ. ದೈನಂದಿನ ಕೆಲಸದಿಂದ ಉಂಟಾಗುವ ದೈಹಿಕ ಸಮಸ್ಯೆ ಹಾಗೂ ಇತರ ಕಾಯಿಲೆಗಳ ಬಗ್ಗೆ ವೈದ್ಯರು ಇಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ನೊಂದಾಯಿತ ಕಾರ್ಮಿಕರು ಮಂಡಳಿಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ನಗೀನ ಬಾನು ಹೇಳಿದರು.
ಕಾರ್ಮಿಕರಿಗೆ ರಕ್ತದೊತ್ತಡ, ಮಧುಮೇಹ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಲಾಯಿತು. ತಜ್ಞ ವೈದ್ಯರಿಂದ ಕಣ್ಣಿನ ತಪಾಸಣೆ ನಡೆಸಿ, ದೃಷ್ಟಿ ದೋಷವಿದ್ದವರಿಗೆ ಸೂಕ್ತ ಸಲಹೆ ನೀಡಲಾಯಿತು.
ಶಾಲಾ ಎಸ್‌ಡಿಎಂಸಿ ಸದಸ್ಯ ಮಂಜುನಾಥ್, ಸತೀಶ್ ಹಾಗೂ ಸುತ್ತಮುತ್ತಲ ಗ್ರಾಮಗಳ ಕಾರ್ಮಿಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.