ADVERTISEMENT

ಸಾಸ್ವೆಹಳ್ಳಿ | ಆಸ್ಪತ್ರೆ ಮೇಲೆ ದಾಳಿ: ವ್ಯಕ್ತಿಯ ಬಂಧನ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 3:11 IST
Last Updated 27 ಡಿಸೆಂಬರ್ 2025, 3:11 IST
<div class="paragraphs"><p>ಸಾಸ್ವೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ದಾಳಿ ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ್ದನ್ನು ಹೊನ್ನಾಳಿ ಪೊಲೀಸರು ಪರಿಶೀಲಿಸಿದರು</p></div>

ಸಾಸ್ವೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ದಾಳಿ ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ್ದನ್ನು ಹೊನ್ನಾಳಿ ಪೊಲೀಸರು ಪರಿಶೀಲಿಸಿದರು

   

ಸಾಸ್ವೆಹಳ್ಳಿ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ದಾಳಿ ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ ಆರೋಪದ ಮೇಲೆ ಮಲ್ಲಿಕಟ್ಟೆ ಗ್ರಾಮದ ರಿಜ್ವಾನ್ ಎಂಬಾತನನ್ನು ಹೊನ್ನಾಳಿ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಡಿ. 24ರಂದು ಮಲ್ಲಿಕಟ್ಟೆ ಗ್ರಾಮದ ಸೈಯದ್ ಅಮೀರ್ ಜಾನ್ (65) ಎಂಬಾತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಪರೀಕ್ಷಿಸಿದ ವೈದ್ಯರು ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ADVERTISEMENT

ಇದರಿಂದ ಆಕ್ರೋಶಗೊಂಡ ಮೃತರ ಸಂಬಂಧಿಕರು ಹಾಗೂ ಗ್ರಾಮಸ್ಥರ ಗುಂಪು ಆಸ್ಪತ್ರೆಯ ಕಿಟಕಿ ಗಾಜುಗಳು, ಸಿಸಿಟಿವಿ ಕ್ಯಾಮೆರಾ ಹಾಗೂ 108 ಆಂಬುಲೆನ್ಸ್‌ನ ಮುಂಭಾಗದ ಗಾಜುಗಳನ್ನು ಒಡೆದಿದ್ದರು. ಅಲ್ಲದೇ ಕರ್ತವ್ಯದಲ್ಲಿದ್ದ ವೈದ್ಯರು ಮತ್ತು ನರ್ಸ್‌ಗಳ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಹೊನ್ನಾಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನಿಖಾಧಿಕಾರಿ ಪಿಎಸ್‌ಐ ಕುಮಾರ್ ಎನ್. ಅವರು ಸ್ಥಳ ಪರಿಶೀಲಿಸಿ ರಿಜ್ವಾನ್‌ನನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.