
ಸಾಸ್ವೆಹಳ್ಳಿ: ಯಾವ ವಿದೇಶಿ ದಾಳಿಗಳಿಗೂ ಅಂಜದೆ ತನ್ನ ಅಸ್ತಿತ್ವವನ್ನು ಗಟ್ಟಿಯಾಗಿ ಉಳಿಸಿಕೊಂಡಿರುವ ಜಗತ್ತಿನ ಏಕೈಕ ಮೃತ್ಯುಂಜಯ ರಾಷ್ಟ್ರ ಭಾರತ ದೇವಾಲಯ ಸಂವರ್ಧನಾ ಸಮಿತಿಯ ರಾಜ್ಯ ಸಂಯೋಜಕ ಮನೋಹರ್ ಮಠದ್ ಅಭಿಪ್ರಾಯಪಟ್ಟರು.
ಬೆನಕನಹಳ್ಳಿಯಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಹಮ್ಮಿಕೊಂಡಿದ್ದ 'ಹಿಂದೂ ಸಂಗಮ' ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾರತ ಹಲವು ಜನಾಂಗದವರನ್ನು ತನ್ನೊಳಗೆ ಮೈಗೂಡಿಸಿಕೊಂಡು ತನ್ನದೇ ಸಂಸ್ಕೃತಿಯೊಂದಿಗೆ ಬೆಳೆಯುತ್ತಿರುವ ರಾಷ್ಟ್ರ. ನಾವೆಲ್ಲರೂ ದೇಶವನ್ನು ಸಂಘಟಿಸಿ ಒಗ್ಗೂಡಿಸುವ ಕಾರ್ಯ ಮಾಡಬೇಕಿದೆ. ಯಾವುದೇ ತಾರತಮ್ಯವಿಲ್ಲದೆ ದೇಶದ ರಕ್ಷಣೆ ಮಾಡುವುದೇ ಸಂಘಟನೆಯ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಗ್ರಾಮದಲ್ಲಿ ಭಾರತಮಾತೆಯ ಭಾವಚಿತ್ರದೊಂದಿಗೆ ಅದ್ಧೂರಿ ಶೋಭಾಯಾತ್ರೆ ನಡೆಯಿತು.
ಸಮಿತಿಯ ಉಪಾಧ್ಯಕ್ಷ ಎಚ್.ಎಂ. ಅರುಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕೋಶಾಧ್ಯಕ್ಷ ಪ್ರವೀಣ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬೀರಗೊಂಡನಹಳ್ಳಿ, ಬೆನಕನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ಆರ್‌ಎಸ್‌ಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.