
ಸಾಸ್ವೆಹಳ್ಳಿ: ‘ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಪೋಷಕರು ಮತ್ತು ಸ್ಥಳೀಯರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು, ಸರ್ಕಾರಿ ಶಾಲೆಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕು’ ಎಂದು ಬಯಲುಸೀಮೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಬಿ. ಮಂಜಪ್ಪ ತಿಳಿಸಿದರು.
ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ (ಕೆಪಿಎಸ್) ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಶಾಲೆಗೆ 121 ವರ್ಷಗಳ ಸುದೀರ್ಘ ಇತಿಹಾಸವಿದೆ. ಇಲ್ಲಿ ಅಕ್ಷರ ಕಲಿತ ಸಾವಿರಾರು ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿರುವುದು ಹೆಮ್ಮೆಯ ವಿಷಯ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪೈಪೋಟಿ ನೀಡುವಂತೆ ಸರ್ಕಾರಿ ಶಾಲೆಗಳು ಬೆಳೆದಿವೆ. ಆದರೂ ಜನರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವುದು ವಿಪರ್ಯಾಸ’ ಎಂದು ಬೇಸರ ವ್ಯಕ್ತಪಡಿಸಿದರು.
ಶಾಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಎ.ಎಚ್., ಗ್ರಾಮ ಪಂಚಾಯಿತಿ ಅಧ್ಯಕ್ಷ ಜಬ್ಬಾರ್ ಅಲಿ ಖಾನ್, ಪ್ರಾಂಶುಪಾಲ ದೇವೀರಪ್ಪ, ಉಪನ್ಯಾಸಕ ಗಣೇಶ ನಾಯ್ಕ, ಉಪಪ್ರಾಂಶುಪಾಲರಾದ ಮಲ್ಲಿಕಾ, ಗ್ರಾಮ ಪಂಚಾಯಿತಿ ಸದಸ್ಯರು, ಎಸ್‌ಡಿಎಂಸಿ ಸದಸ್ಯರು, ಮುಖ್ಯ ಶಿಕ್ಷಕ ಜೀವಲ ನಾಯ್ಕ, ಶಿಕ್ಷಣ ಇಲಾಖಾ ಅಧಿಕಾರಿಗಳು, ಗ್ರಾಮದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.